ಗಣನೀಯ ಬೆಲೆ ಇಳಿಕೆ!..ಒಪ್ಪೋ A17 ಫೋನ್ ಬೆಲೆಯಲ್ಲಿ ಶೇ.50% ಡಿಸ್ಕೌಂಟ್!
ಒಪ್ಪೋ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ ಒಪ್ಪೋ A17 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಕಂಡಿದೆ. ಮೀಡ್ ರೇಂಜ್ ಮಾದರಿಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಇದೀಗ ಭಾರ್ಜರಿ ಬೆಲೆ ಇಳಿಕೆಯಿಂದಾಗಿ ಬಜೆಟ್ ಬೆಲೆಯಲ್ಲಿ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ.

ಹೌದು, ರಿಲಯನ್ಸ್ ಡಿಜಿಟಲ್ ಮೊಬೈಲ್ ಡೇಸ್ ಸೇಲ್‌ನಲ್ಲಿ ಒಪ್ಪೋ A17 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಶೇ. 50% ರಿಯಾಯಿತಿ ಆಗಿದೆ. 4GB + 64GB ವೇರಿಯಂಟ್ ಬೆಲೆಯು 24,999ರೂ. ಆಗಿದ್ದು, ಡಿಸ್ಕೌಂಟ್‌ನಲ್ಲಿ ಫೋನ್ 12,499ರೂ. ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಮೊಬಿಕ್ವಿಕ್ ಮೂಲಕ ಖರೀದಿಸಿದರೆ, 1000ರೂ. ರಿಯಾಯಿತಿ ಸಿಗಲಿದೆ. ಹಾಗಾದರೇ ಒಪ್ಪೋ A17 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A17 ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 100% DCI-P3 ಕಲರ್ ಗ್ಯಾಮಟ್ ರೇಂಜ್ ಅನ್ನು ಹೊಂದಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಒಪ್ಪೋ A17 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ಒಪ್ಪೋ A17 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A17 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಆಕ್ಸಿಲೆರೋಮೀಟರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A17 ಸ್ಮಾರ್ಟ್‌ಫೋನ್ 4GB + 64GB ವೇರಿಯಂಟ್ ಬೆಲೆಯು 24,999ರೂ. ಆಗಿದ್ದು, ಡಿಸ್ಕೌಂಟ್‌ನಲ್ಲಿ ಫೋನ್ 12,499ರೂ. ಗಳಿಗೆ ಲಭ್ಯವಾಗಲಿದೆ. ಗ್ರಾಹಕರು ರಿಲಾಯನ್ಸ್ ಡಿಜಿಟಲ್ ತಾಣದಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








