ಒಪ್ಪೋ A17 ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ಒಪ್ಪೋ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಟೆಕ್‌ ಮಾರುಕಟ್ಟೆಗೆ A ಸರಣಿಯಲ್ಲಿ ಹೊಸ ಒಪ್ಪೋ A17 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದು ಬಜೆಟ್ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದು, ಆಕರ್ಷಕ ವಿನ್ಯಾಸವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಒಪ್ಪೋ A17

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A17 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದು ಫ್ಲಾಟ್ ಬ್ಯಾಕ್ ಮತ್ತು ಫ್ಲಾಟ್ ಎಡ್ಜ್‌ನೊಂದಿಗೆ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A17 ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 100% DCI-P3 ಕಲರ್‌ ಗ್ಯಾಮಟ್‌ ರೇಂಜ್‌ ಅನ್ನು ಹೊಂದಿದೆ. ಇದು ವಾಟರ್-ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒಪ್ಪೋ A17 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ A17 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A17 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಆಕ್ಸಿಲೆರೋಮೀಟರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A17 ಸ್ಮಾರ್ಟ್‌ಫೋನ್‌ ಪ್ರಸ್ತುತ ಮಲೇಷ್ಯಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಮಲೆಷ್ಯಾದಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ MYR599 (ಸುಮಾರು 10,619ರೂ)ಆಗಿದೆ. ಇನ್ನು ಈ ಫೋನ್‌ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಭಾರತಕ್ಕೂ ಕೂಡ ಶೀಘ್ರದಲ್ಲೇ ಎಂಟ್ರಿ ನೀಡುವ ಸಾಧ್ಯತೆಯಿದೆ. ಆದರೆ ಬಿಡುಗಡೆಯ ದಿನಾಂಕ ಇನ್ನು ಕೂಡ ಬಹಿರಂಗವಾಗಿಲ್ಲ.

ಒಪ್ಪೋ

ಇದಲ್ಲದೆ, ಒಪ್ಪೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಹೊಸ ಒಪ್ಪೋ F21s ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, 60Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಡಿಸ್‌ಪ್ಲೇಯು 2400 x 1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಅನ್ನು ಪಡೆದಿದೆ. ಜೊತೆಗೆ ಈ ಫೋನ್ 8GB RAM ಮತ್ತು 128GB ಆಂತರಿಕ ಸೌಲಭ್ಯವನ್ನು ಪಡೆದಿದೆ.

Best Mobiles in India

English summary
Oppo A17 launched with 50MP dual camera: specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X