Home
ಸುದ್ದಿಜಾಲ

ಒಪ್ಪೋ ಸಂಸ್ಥೆಯ ಈ ಎಂಟ್ರಿ ಲೆವೆಲ್‌ ಫೋನಿಗೆ ಭಾರೀ ಡಿಸ್ಕೌಂಟ್‌!

ದೇಶಿಯ ಮೊಬೈಲ್‌ ಮಾರುಕಟ್ಟೆಯಲ್ಲಿ ಒಪ್ಪೋ ಸಂಸ್ಥೆಯು ಭಿನ್ನ ದರದ ರೇಂಜ್‌ನಲ್ಲಿ ಮೊಬೈಲ್‌ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಒಪ್ಪೋ ಕಂಪನಿಯ ಅಗ್ಗದ ಫೋನ್‌ಗಳ ಪೈಕಿ ಒಪ್ಪೋ A17 ಸ್ಮಾರ್ಟ್‌ಫೋನ್‌ ಕೂಡಾ ಒಂದಾಗಿದ್ದು, ಇದು ಆಕರ್ಷಕ ಲುಕ್‌ ಪಡೆದುಕೊಂಡಿದೆ. ಅಲ್ಲದೇ ಸದ್ಯ ಈ ಮೊಬೈಲ್‌ ಜನಪ್ರಿಯ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಭಾರೀ ರಿಯಾಯಿತಿ ಪ್ರೈಸ್ಟ್ಯಾಗ್‌ ನಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಒಪ್ಪೋ A17 ಮೊಬೈಲ್‌ ಶೇ. 27% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 4GB + 64GB ವೇರಿಯಂಟ್‌ ಬೆಲೆ 14,999ರೂ. ಇದ್ದು, ಸದ್ಯ 10,999ರೂ. ಗಳ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಒಪ್ಪೋ ಸಂಸ್ಥೆಯ ಈ ಎಂಟ್ರಿ ಲೆವೆಲ್‌ ಫೋನಿಗೆ ಭಾರೀ ಡಿಸ್ಕೌಂಟ್‌!

ಹಾಗೆಯೇ ಹೆಚ್ಚುವರಿಯಾಗಿ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಸಿಗಲಿವೆ. ಅಂದಹಾಗೆ ಇದು ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗಾದರೇ ಒಪ್ಪೋ A17 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A17 ಮೊಬೈಲ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 100% DCI-P3 ಕಲರ್‌ ಗ್ಯಾಮಟ್‌ ರೇಂಜ್‌ ಅನ್ನು ಹೊಂದಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಪಡೆದುಕೊಂಡಿದೆ.

ಒಪ್ಪೋ A17 ಮೊಬೈಲ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ 4GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಒಪ್ಪೋ A17 ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.

ಒಪ್ಪೋ A17 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಆಕ್ಸಿಲೆರೋಮೀಟರ್‌ ಅನ್ನು ಒಳಗೊಂಡಿದೆ.

ಹಾಗೆಯೇ ಒಪ್ಪೋ A17 ಮೊಬೈಲ್‌ 4GB + 64GB ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ. ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಫೋನ್‌ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Oppo A17 received Great price drop on amazon. offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+