Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ A17 ! ಫೀಚರ್ಸ್‌ ಹೇಗಿದೆ?

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಬೇಡಿಕೆಯಿದೆ. ಬಜೆಟ್‌ ಪ್ರೈಸ್‌ಟ್ಯಾಗ್‌ ಮಾತ್ರವಲ್ಲದ ಒಪ್ಪೋದ ಹೈ ಎಂಡ್‌ ಪ್ರೈಸ್‌ಟ್ಯಾಗ್‌ ಸ್ಮಾರ್ಟ್‌ಫೋನ್‌ಗಳು ಕೂಡ ಸಾಕಷ್ಟು ಗಮನಸೆಳೆದಿವೆ. ಸದ್ಯ ಇದೀಗ ಒಪ್ಪೋ ಕಂಪೆನಿ ಮತ್ತೊಂದು ಹೊಸ ಬಜೆಟ್‌ ಸ್ನೇಹಿ A ಸರಣಿಯ ಒಪ್ಪೋ A17 ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅನ್ನು ಹೊಂದಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ A17 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.56-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A17 ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 83.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 269 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ಪ್ರೊಸೆಸರ್‌ ಸಾಮರ್ಥ್ಯ ಹೇಗಿದೆ?

ಒಪ್ಪೋ A17 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12ನಲ್ಲಿ ರನ್‌ ಆಗಲಿದೆ. ಇದು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಹಾಗೆಯೇ ಈ ಫೋನ್‌ ವರ್ಚುವಲ್‌ RAM ಫೀಚರ್ಸ್‌ ಹೊಂದಿದ್ದು, ಹೆಚ್ಚುವರಿಯಾಗಿ 4GB RAM ಅನ್ನು ಪಡೆಯಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ A17 ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಕ್ಯಾಮೆರಾ AI, 360-ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಮತ್ತು ಇತರ ಇಮೇಜ್ ಟಕ್ನಾಲಜಿ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನು?

ಬ್ಯಾಟರಿ ಬ್ಯಾಕ್‌ಅಪ್‌ ಏನು?

ಒಪ್ಪೋ A17 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದು USB-C ಚಾರ್ಜಿಂಗ್‌ ಪೋರ್ಟ್‌ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ ಅನ್ನು ಬೆಂಬಲಿಸಲಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಲೆದರ್ ಬ್ಯಾಕ್ ಮತ್ತು ಸ್ಪ್ಲಾಶ್ ರಕ್ಷಣೆಗಾಗಿ IPX4 ರೇಟಿಂಗ್‌ಗಳನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, ಒಂದು ತುಂಡು ಫಾಕ್ಸ್ ಲೆದರ್ ಬ್ಯಾಕ್ ಮತ್ತು ಸ್ಪ್ಲಾಶ್ ರಕ್ಷಣೆಗಾಗಿ IPX4 ರೇಟಿಂಗ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A17 ಸ್ಮಾರ್ಟ್‌ಫೋನ್‌ ಭಾರತದಲ್ಲಿ 12499ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆನ್‌ಲೈನ್‌ ಮತ್ತು ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇದು ಮಿಡ್ನೈಟ್ ಬ್ಲ್ಯಾಕ್ ಮತ್ತು ಲೇಕ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
OPPO A17 with 5000mAh battery launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+