ಒಪ್ಪೋ A17k ಫೋನ್‌ಗೆ ಈಗ ಬೊಂಬಟ್ ಡಿಸ್ಕೌಂಟ್!..ಸೂಪರ್ ಆಫರ್!
ಒಪ್ಪೋ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಪ್ಪೋ A17k ಸ್ಮಾರ್ಟ್‌ಫೋನ್ ಸಹ ಒಂದಾಗಿದೆ. ಈ ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಕಂಡಿದ್ದು, ಹೀಗಾಗಿ ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಬೆಲೆ ಇಳಿಕೆಯಿಂದಾಗಿ ಅಗ್ಗದ ಬೆಲೆಯಲ್ಲಿ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಜೊತೆಗೆ ಹಿಂಬದಿ ಸಿಂಗಲ್ ಕ್ಯಾಮೆರಾ ಸೆನ್ಸಾರ್ ಪಡೆದಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ A17k ಸ್ಮಾರ್ಟ್‌ಫೋನ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 3GB + 64 GB ಸ್ಟೋರೇಜ್ ವೇರಿಯಂಟ್ ಬೆಲೆಯಲ್ಲಿ 27% ರಷ್ಟು ರಿಯಾಯಿತಿ ಪಡೆದಿದ್ದು, 9,499 ರೂ. ಗಳ ಆಫರ್ ಬೆಲೆಯಲ್ಲಿ ಲಭ್ಯ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೆಲವು ಆಫರ್ ಸಹ ಲಭ್ಯವಾಗಲಿವೆ ಜೊತೆಗೆ ಎಕ್ಸ್‌ಚೇಂಜ್ ಕೊಡುಗೆ ಕೂಡಾ ಗ್ರಾಹಕರಿಗೆ ಲಭ್ಯ.

ಇನ್ನು ಒಪ್ಪೋ A17k 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಹಿಂಭಾಗದಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಹಾಗೆಯೇ ಈ ಫೋನಿನ ಇಂಟರ್ನಲ್ ಸ್ಟೋರೇಜ್ ಅನ್ನು 1 TB ವರೆಗೆ ಹೆಚ್ಚಿಗೆ ಮಾಡಿಕೊಳ್ಳಬಹುದಾದ ಆಯ್ಕೆ ನೀಡಲಾಗಿದೆ. ಹಾಗೆಯೇ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಫೀಕ್ಸೆಡ್ ಫೋಕಸ್ ಸೆನ್ಸರ್ ಕ್ಯಾಮೆರಾ ರಚನೆ ಪಡೆದಿದೆ. ಇನ್ನುಳಿದಂತೆ ಒಪ್ಪೋ A17k ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A17k ಡಿಸ್‌ಪ್ಲೇ ಮತ್ತು ವಿನ್ಯಾಸ : ಒಪ್ಪೋ A17k ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ + ರೆಸಲ್ಯೂಶನ್ ಜೊತೆಗೆ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಫೋನ್ 720 x 1612 ಪಿಕ್ಸೆಲ್ ರೆಸಲ್ಯೂಶನ್ ನೀಡಲಿದೆ. ಹಾಗೆಯೇ ಇದು 60Hz ರಿಫ್ರೆಶ್ ರೇಟ್, 600 nits ಬ್ರೈಟ್‌ನೆಸ್ ನೀಡುವ ಫೀಚರ್ಸ್ ಪಡೆದಿದೆ.
ಒಪ್ಪೋ A17k ಪ್ರೊಸೆಸರ್ ಪವರ್ ಯಾವುದು : ಒಪ್ಪೋ A17k ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ಜೊತೆಗೆ Color OS 12.1 ಅನ್ನು ಪಡೆದಿದ್ದು, ಒಪ್ಪೋ A17k ಮೀಡಿಯಾ ಟೆಕ್ ಹಿಲಿಯೋ G35 ಪ್ರೊಸೆಸರ್ ನಿಂದ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ 3 GB RAM ಜೊತೆಗೆ 64 GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಪಡೆದಿದೆ. ಜೊತೆಗೆ ಇಂಟರ್ನಲ್ ಸ್ಟೋರೇಜ್ ಅನ್ನು 1 TB ವರೆಗೆ ಹೆಚ್ಚಿಗೆ ಮಾಡಿಕೊಳ್ಳಬಹುದಾದ ಆಯ್ಕೆ ನೀಡಲಾಗಿದೆ. ಇದರೊಂದಿಗೆ ಹಾಗೆಯೇ 4 GB RAM ಅನ್ನು ವಿಸ್ತರಿಸುವ ಆಯ್ಕೆ ಸಹ ಒಳಗೊಂಡಿದೆ.
ಒಪ್ಪೋ A17k ಸಿಂಗಲ್ ಕ್ಯಾಮೆರಾ ಸೆನ್ಸಾರ್ : ಒಪ್ಪೋ A17k ಸ್ಮಾರ್ಟ್‌ಫೋನ್ 8 ಮೆಗಾ ಪಿಕ್ಸೆಲ್ ಆಟೋಫೋಕಸ್ ಸೆನ್ಸರ್ ಹಾಗೂ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಫೀಕ್ಸೆಡ್ ಫೋಕಸ್ ಸೆನ್ಸರ್ ಕ್ಯಾಮೆರಾ ರಚನೆ ಹೊಂದಿದ್ದು, ಇವು OIS ಫೀಚರ್ಸ್ ಪಡೆದಿಲ್ಲ. ಹಾಗೆಯೇ IPX4 ರೇಟಿಂ ಗ್‌ನೊಂದಿಗೆ ಫ್ಲ್ಯಾಶ್ ರೆಸಿಸ್ಟೆಂಟ್ ವಿಶೇಷತೆ ಪಡೆದಿದೆ. ಇನ್ನು ಈ ಫೋನ್ 189 ಗ್ರಾಂ ತೂಕ ಪಡೆದಿದೆ.
ಒಪ್ಪೋ A17k ಬ್ಯಾಟರಿ ಹಾಗೂ ಇತರೆ ಸೌಲಭ್ಯಗಳು : ಒಪ್ಪೋ A17k ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಸೈಡ್ ಫಿಂಗರ್ ಪ್ರಿಂಟ್ ಅನ್‌ಲಾಕ್ ಆಯ್ಕೆಯೊಂದಿಗೆ ಅಲ್ಟ್ರಾವಾಲ್ಯೂಮ್ ಮೋಡ್ ಫೀಚರ್ಸ್ ಇದರಲ್ಲಿದೆ. ಇನ್ನು 3.5mm ಹೆಡ್‌ಫೋನ್ ಜ್ಯಾಕ್ ಇದರಲ್ಲಿದೆ.
ಒಪ್ಪೋ A17k ಮೆಮೊರಿ ಹಾಗೂ ಕಲರ್ ಆಯ್ಕೆ : ಒಪ್ಪೋ A17k ಸ್ಮಾರ್ಟ್‌ಫೋನ್ 3 GB + 64 GB ಸ್ಟೋರೇಜ್ ವೇರಿಯಂಟ್ ಹಾಗೂ 4 GB + 64 GB ಸ್ಟೋರೇಜ್ ವೇರಿಯಂಟ್ ನಲ್ಲಿ ಲಭ್ಯವಿದೆ. ಈ ಮೊಬೈಲ್ ಅನ್ನು ಗೋಲ್ಡ್ ಮತ್ತು ನೇವಿ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರು ಖರೀದಿ ಮಾಡಬಹುದಾಗಿದೆ.


Click it and Unblock the Notifications








