ಒಪ್ಪೋದ ಈ ಅಗ್ಗದ ಜನಪ್ರಿಯ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಜನಪ್ರಿಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾಮ್‌ನಲ್ಲಿ ಎಲ್ಲ ಮಾದರಿಯ ಸ್ಮಾರ್ಟ್‌ಫೊನ್‌ಗಳಿಗೆ ಸಖತ್ ಡಿಸ್ಕೌಂಟ್ ಲಭ್ಯ ಇರುತ್ತದೆ. ಹೀಗಾಗಿ ಅನೇಕ ಗ್ರಾಹಕರು ಅಮೆಜಾನ್ ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಮೊಬೈಲ್ ಖರೀದಿಗೆ ಮುಂದಾಗುತ್ತಾರೆ. ಸದ್ಯ ತಾಣದಲ್ಲಿ ಒಪ್ಪೋ A18 ಮೊಬೈಲ್ ಆಕರ್ಷಕ ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಹಬ್ಬದ ವಾತಾವರಣ ಎನಿಸಿದೆ.
ಹೌದು, ದೈತ್ಯ ಇ ಕಾಮರ್ಸ್ ಅಮೆಜಾನ್ ತಾಣದಲ್ಲಿ ಒಪ್ಪೋ A18 ಮೊಬೈಲ್ ಶೇ. 33% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಗ್ರಾಹಕರು 4GB RAM + 64 GB ವೇರಿಯಂಟ್‌ನ ಫೋನ್ ಅನ್ನು 9,999 ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು.

ಇದಲ್ಲದೇ ಗ್ರಾಹಕರು ಲಭ್ಯ ಇರುವ ಎಕ್ಸ್‌ಚೆಂಜ್ ಆಫರ್, ಬ್ಯಾಂಕ್ ಕೊಡುಗೆ ಹಾಗೂ ಇತರೆ ಕೊಡುಗೆ ಪಡೆದುಕೊಂಡರೆ ಮತ್ತಷ್ಟು ರಿಯಾಯಿತಿ ಬೆಲೆಯಲ್ಲಿ ಫೋನ್ ಪಡೆಯಬಹುದು.
ಅಂದಹಾಗೆ ಒಪ್ಪೋ ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್ ಪವರ್‌ನೊಂದಿಗೆ ಕೆಲಸ ನಿರ್ವಹಿಸಲಿದ್ದು, ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದೆ. ಇನ್ನುಳಿದಂತೆ ಒಪ್ಪೋ A18 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A18 ಸ್ಮಾರ್ಟ್‌ಫೋನ್ ಫೀಚರ್ಸ್
ಒಪ್ಪೋ A18 ಸ್ಮಾರ್ಟ್‌ಫೋನ್ 6.56 ಇಂಚಿನ ಪೂರ್ಣ IPS LCD ಡಿಸ್‌ಪ್ಲೇ ಅನ್ನು ಪಡೆದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲಿದ್ದು, 720 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ.
ಅದೇ ರೀತಿ ಒಪ್ಪೋ A18 ಫೋನ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಇದರ ಜೊತೆಗೆ ಈ ಫೋನ್ 4GB RAM + 128GB ಆಂತರಿಕ ಸ್ಟೋರೇಜ್ ಸೌಲಭ್ಯವನ್ನು ಸಹ ಪಡೆದಿದೆ.
ಒಪ್ಪೋ A18 ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಇದೆ.
ಇನ್ನು ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಹೊಂದಿದ್ದು, ಪೂರಕ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಒಪ್ಪೋ A38 ಫೀಚರ್ಸ್
ಒಪ್ಪೋ ಕಂಪನಿಯ ಒಪ್ಪೋ A38 ಮೊಬೈಲ್ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ.
ಹಾಗೆಯೇ ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದ್ದು, ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.


Click it and Unblock the Notifications








