Home
ಸುದ್ದಿಜಾಲ

ಭಾರತಕ್ಕೆ ಕಾಲಿಟ್ಟ ಒಪ್ಪೋ A18 ಸ್ಮಾರ್ಟ್‌ಫೋನ್‌! ಕ್ಯಾಮೆರಾ ಯಾವುದು? ಬೆಲೆ ಎಷ್ಟು?

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಮಾರುಕಟ್ಟೆಯಿದೆ. ವಿಭಿನ್ನ ಲುಕ್‌ ಹಾಗೂ ಸ್ಟೈಲಿಶ್‌ ಫೀಚರ್ಸ್‌ಗಳಿಂದಾಗಿ ಒಪ್ಪೋ ಫೋನ್‌ಗಳು ಬೇಡಿಕೆ ಪಡೆದುಕೊಂಡಿವೆ. ಇದೀಗ ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ A18 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಹೌದು, ಒಪ್ಪೋ A18 ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಇದು ಮೀಡಿಯಾ ಟೆಕ್‌ ಆಕ್ಟಾ-ಕೋರ್ ಹೆಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಜೊತೆಗೆ 90Hz ರಿಫ್ರೆಶ್‌ ರೇಟ್‌ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ. ಇದರ ವಿಶೇಷತೆ ಏನು? ಬೆಲೆ ಎಷ್ಟು ಇದೆಲ್ಲದರ ಕಂಪ್ಲೀಟ್‌ ಡಿಟೇಲ್ಸ್‌ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಕಾಲಿಟ್ಟ ಒಪ್ಪೋ A18 ಸ್ಮಾರ್ಟ್‌ಫೋನ್‌! ಕ್ಯಾಮೆರಾ ಯಾವುದು? ಬೆಲೆ ಎಷ್ಟು

ಒಪ್ಪೋ A18 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A18 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 89.90% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು 720 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ A18 ಪ್ರೊಸೆಸರ್‌ ಯಾವುದು?
ಒಪ್ಪೋ A18 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಆಕ್ಟಾ-ಕೋರ್ ಹೆಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 4GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.

ಒಪ್ಪೋ A18 ಕ್ಯಾಮೆರಾ ಸೆಟ್‌ಅಪ್‌
ಒಪ್ಪೋ A18 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒಪ್ಪೋ A18 ಬ್ಯಾಟರಿ ಮತ್ತು ಇತರೆ
ಒಪ್ಪೋ A18 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್‌ ಸಾಮರ್ಥ್ಯವನ್ನು ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, 4G, Wi-Fi , ಬ್ಲೂಟೂತ್‌ v5.3, 3.5mm ಆಡಿಯೊ ಜಾಕ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ಬೆಂಬಲವನ್ನು ಹೊಂದಿದೆ.

ಒಪ್ಪೋ A18 ಬೆಲೆ ಮತ್ತು ಲಭ್ಯತೆ
ಒಪ್ಪೋ A18 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಏಕೈಕ 4GB RAM + 64GB ಸ್ಟೋರೇಜ್ ಕಾನ್ಫಿಗರೇಶನ್‌ ಆಯ್ಕೆಗೆ 9,999ರೂ.ಬೆಲೆ ಹೊಂದಿದೆ. ಇನ್ನು ಈ ಡಿವೈಸ್‌ ಗ್ಲೋಯಿಂಗ್ ಬ್ಲ್ಯಾಕ್ ಅಥವಾ ಗ್ಲೋಯಿಂಗ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಒಪ್ಪೋ ಇಂಡಿಯಾ ವೆಬ್‌ಸೈಟ್ ಮತ್ತು ರಿಟೇಲ್ ಔಟ್‌ಲೆಟ್‌ಗಳ ಮೂಲಕ ಖರೀದಿಸಬಹುದಾಗಿದೆ.

ಇದಲ್ಲದೆ ಒಪ್ಪೋ ಕಂಪೆನಿ ಇತ್ತೀಚಿಗೆ ಒಪ್ಪೋ A58 4G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
OPPO A18 With Dual Cameras Launched in India: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+