ಒಪ್ಪೋ A18 ಸ್ಮಾರ್ಟ್‌ಫೋನ್ ಅನಾವರಣ!..ಫುಲ್ ಜಬರ್ದಸ್ತ್ ಫೀಚರ್ಸ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಒಪ್ಪೋ ಸಂಸ್ಥೆಯು ಇದೀಗ ಹೊಸದಾಗಿ ಒಪ್ಪೋ A18 (OPPO A18) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹಾಗೂ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಫೀಚರ್ಸ್ ಅನ್ನು ಒಳಗೊಂಡಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM + 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಮಾಡೆಲ್ ಅನ್ನು ಪಡೆದಿದೆ.
ಹೌದು, ಒಪ್ಪೋ ಸಂಸ್ಥೆಯು ಯುನಿಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಒಪ್ಪೋ A18 (OPPO A18) ಫೋನ್ ಲಾಂಚ್ ಮಾಡಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಹೆಲಿಯೊ G85 SoC ಪ್ರೊಸೆಸರ್ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ.

ಹಾಗೆಯೇ ಒಪ್ಪೋ A18 (OPPO A18) ಫೋನ್ ಸೈಡ್ ಮೌಂಡೆಟ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ವಿಸ್ತರಿಸುವ ಆಯ್ಕೆ ಲಭ್ಯ ಮಾಡಿದೆ. ಅಂದಹಾಗೆ ಈ ಫೋನ್ ಗ್ಲೋವಿಂಗ್ ಬ್ಲ್ಯಾಕ್ ಹಾಗೂ ಗ್ಲೋವಿಂಗ್ ಬ್ಲೂ ಕಲರ್ ಆಯ್ಕೆ ಪಡೆದಿದೆ. ಹಾಗಾದರೇ ಒಪ್ಪೋ A18 (OPPO A18) ಫೋನ್‌ಗಳ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A18 ಡಿಸ್‌ಪ್ಲೇ ಫೀಚರ್ಸ್
ಒಪ್ಪೋ A18 ಸ್ಮಾರ್ಟ್‌ಫೋನ್ 6.56 ಇಂಚಿನ ಪೂರ್ಣ IPS LCD ಡಿಸ್‌ಪ್ಲೇ ಅನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲಿದ್ದು, 720 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ.
ಒಪ್ಪೋ A18 ಪ್ರೊಸೆಸರ್ ಫೀಚರ್ಸ್
ಒಪ್ಪೋ A18 ಫೋನ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಜೊತೆಗೆ ಈ ಫೋನ್ 4GB RAM + 128GB ಆಂತರಿಕ ಸೌಲಭ್ಯವನ್ನು ಪಡೆದಿದೆ.
ಒಪ್ಪೋ A18 ಕ್ಯಾಮೆರಾ ಹಾಗೂ ಬ್ಯಾಟರಿ
ಒಪ್ಪೋ A18 ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದಿದ್ದು, ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ನಲ್ಲಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಪೂರಕ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಒಪ್ಪೋ A38 ಸ್ಮಾರ್ಟ್‌ಫೋನ್ ಫೀಚರ್ಸ್
ಒಪ್ಪೋ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ A38 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ.
ಹಾಗೆಯೇ ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದ್ದು, ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಇದು 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.


Click it and Unblock the Notifications








