ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಒಪ್ಪೋ A2 5G ಸ್ಮಾರ್ಟ್‌ಫೋನ್! ಸ್ಟೈಲಿಶ್ ಲುಕ್, ಜಬರ್ದಸ್ತ್ ಫೀಚರ್ಸ್!
ಒಪ್ಪೋ ಸಂಸ್ಥೆ ತನ್ನ ಹೊಸ ಸ್ಮಾರ್ಟ್‌ಫೋನ್ ಒಪ್ಪೋ A2 5G ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಒಪ್ಪೋ A ಸರಣಿಯ ಹೊಸ ಸ್ಮಾರ್ಟ್‌ಫೋನ್ ಆಗಿದೆ. ಇದು 90Hz ರಿಫ್ರೆಶ್ ರೇಟ್‌ನೊಂದಿಗೆ 6.72 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್‌ನ ಆಕ್ಟಾ-ಕೋರ್ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ.
ಹೌದು, ಒಪ್ಪೋ A2 5G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A2 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ಒಪ್ಪೋ A2 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 680 ನೀಟ್ಸ್ ಬ್ರೈಟ್‌ನೆಸ್ನೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ 89.4% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಬರಲಿದೆ.
ಒಪ್ಪೋ A2 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಒಪ್ಪೋ A2 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದಿಲ್ಲ ಎನ್ನಲಾಗಿದೆ.

ಒಪ್ಪೋ A2 5G ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A2 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಒಪ್ಪೋ A2 5G ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒಪ್ಪೋ A2 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/ NSA, Wi-Fi 802.11 ac, ಬ್ಲೂಟೂತ್ v5.1, GPS, 3.5mm ಆಡಿಯೋ ಜಾಕ್, USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP54 ರೇಟಿಂಗ್, ಸ್ಟೀರಿಯೋ ಸ್ಪೀಕರ್ ಅನ್ನು ಸಹ ಹೊಂದಿದೆ.

ಒಪ್ಪೋ A2 5G ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ಒಪ್ಪೋ A2 5G ಸ್ಮಾರ್ಟ್‌ಫೋನ್ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ ಚೀನಾದಲ್ಲಿ CNY 1699 (ಸುಮಾರು 19,700ರೂ)ಬೆಲೆ ಪಡೆದಿದೆ. ಆದರೆ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಹೊಂದಿರುವ ರೂಪಾಂತರವು CNY 1799 (ಸುಮಾರು 20,500ರೂ) ಬೆಲೆಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಕಪ್ಪು, ಹಸಿರು ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇದು ಇದೇ ನವೆಂಬರ್ 6 ರಿಂದ ಚೀನಾದಲ್ಲಿ ಮಾರಾಟವಾಗಲಿದೆ. ಆದರೆ ಭಾರತಕ್ಕೆ ಬರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.


Click it and Unblock the Notifications








