ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್! ಫೀಚರ್ಸ್ ಹೇಗಿದೆ?
ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿರುವ ಒಪ್ಪೋ ಕಂಪೆನಿ ಹೊಸ ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಒಪ್ಪೋ ಕಂಪೆನಿ ಅಧಿಕೃತವಾಗಿ ಬಹಿರಂಗಪಡಿಸಿದೆ.
ಹೌದು, ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 15 ರಂದು ಬಿಡುಗಡೆ ಆಗಲಿದೆ. ಇನ್ನು ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7050SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 2412 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಪಂಚ್-ಹೋಲ್ ಕರ್ವ್ಡ್ OLED ಡಿಸ್‌ಪ್ಲೇ ಆಗಿದೆ.
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7050SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ.
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ.
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ದೃಢಪಡಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ಒಪ್ಪೋ A2 ಪ್ರೊ ಸ್ಮಾರ್ಟ್‌ಫೋನ್ ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗಲಿದೆ. ಇದರ ಬೇಸ್ ಮಾಡೆಲ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯು CNY 2,099 (ಸುಮಾರು 24,200ರೂ) ಬೆಲೆ ಹೊಂದಿರಲಿದೆ. ಆದರೆ 12GB RAM ಮತ್ತು 256GB ಆಯ್ಕೆಯ ಬೆಲೆ CNY 2,299 (ಅಂದಾಜು 26,100ರೂ)ಬೆಲೆ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಡೆಸರ್ಟ್ ಬ್ರೌನ್ ಮತ್ತು ಡಸ್ಕ್ ಕ್ಲೌಡ್ ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಇದಲ್ಲದೆ ಒಪ್ಪೋ ಕಂಪೆನಿ ಇತ್ತೀಚಿಗೆ ಒಪ್ಪೋ A58 4G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇನ್ನು ಒಪ್ಪೋ A58 4G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ನಿಮ್ಮ ಮೊಬೈಲ್‌ನಲ್ಲಿ ಫೈಲ್‌ಗಳು ಮತ್ತು ಅಪ್ಲಿಕೇಶನ್‌ಗಳಿಗೆ ನೀವು ಸಾಕಷ್ಟು ಸ್ಥಳಾವಕಾಶವನ್ನು ಹೊಂದಿದೆ.


Click it and Unblock the Notifications








