ಒಪ್ಪೋ A2 ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗ! ಫೀಚರ್ಸ್ ನಿರೀಕ್ಷೆ ಏನು?
ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಡಿಮ್ಯಾಂಡ್ ಇದೆ. ಇದೇ ಕಾರಣಕ್ಕೆ ಬಿಡುಗಡೆಗೂ ಮುನ್ನವೇ ಒಪ್ಪೋ ಸ್ಮಾರ್ಟ್‌ಫೋನ್‌ಗಳು ಭಾರಿ ಸೌಂಡ್ ಮಾಡುತ್ತವೆ. ಇದೇ ಹಾದಿಯಲ್ಲಿ ಇದೀಗ ಒಪ್ಪೋ A2 ಸ್ಮಾರ್ಟ್‌ಫೋನ್ ಕೂಡ ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದೆ.
ಹೌದು, ಒಪ್ಪೋ A2 ಸ್ಮಾರ್ಟ್‌ಫೋನ್ ಇದೇ ನವೆಂಬರ್ 11 ರಂದು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ ಇತ್ತೀಚೆಗೆ ಬಿಡುಗಡೆಯಾದ ಒಪ್ಪೋ A79 ನ ರಿಬ್ರಾಂಡೆಡ್ ಆವೃತ್ತಿಯಾಗಿದೆ. ಇದು ಆಕ್ಟಾ-ಕೋರ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G57 MP2 GPU ಸಪೋರ್ಟ್ ಪಡೆದಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A2 ಡಿಸ್‌ಪ್ಲೇ ರಚನೆ
ಒಪ್ಪೋ A2 ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯೊಂದಿಗೆ ಬರುವ ಸಾಧ್ಯತೆಯೊದೆ. ಈ ಡಿಸ್‌ಪ್ಲೇ 2412 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರುತ್ತದೆ. ಇದಲ್ಲದೆ ಈ ಡಿಸ್‌ಪ್ಲೇ ಎಲ್ಲಾ ದಿನದ AI ಐ ಪ್ರೊಟೆಕ್ಷನ್ ಅನ್ನು ಹೊಂದಿದೆ.
ಒಪ್ಪೋ A2 ಪ್ರೊಸೆಸರ್ ಯಾವುದು?
ಒಪ್ಪೋ A2 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 OS-ಆಧಾರಿತ ColorOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ.

ಒಪ್ಪೋ A2 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A2 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ JN1 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ Omnivision OV02B1B ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಒಪ್ಪೋ A2 ಬ್ಯಾಟರಿ ಬ್ಯಾಕ್‌ಅಪ್ ಮತ್ತು ಇತರೆ
ಒಪ್ಪೋ A2 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಮತ್ತು ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಒಪ್ಪೋ A2 ಬೆಲೆ ಮತ್ತು ಲಭ್ಯತೆ
ಒಪ್ಪೋ A2 ಸ್ಮಾರ್ಟ್‌ಫೋನ್ 12GB RAM ಮತ್ತು 256GB ಸ್ಟೋರೇಜ್ ಮಾದರಿಗೆ ಅಂದಾಜು CNY 1999 (ಸುಮಾರು 22,800ರೂ)ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಐಸ್ ಕ್ರಿಸ್ಟಲ್ ಪರ್ಪಲ್, ಕ್ಲಿಯರ್ ವೇವ್ ಗ್ರೀನ್ ಮತ್ತು ಕ್ವೈಟ್ ಸೀ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.
ಇನ್ನು ಇತ್ತೀಚಿಗೆ ಒಪ್ಪೋ ಕಂಪೆನಿ ಭಾರತದಲ್ಲಿ ಒಪ್ಪೋ A79 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ "ಆಲ್-ಡೇ AI ಐ ಕಂಫರ್ಟ್" ಟೆಕ್ನಾಲಜಿಯನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 OS ಆಧಾರಿತ ColorOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.


Click it and Unblock the Notifications








