ಸೈಲೆಂಟ್ ಆಗಿ ಎಂಟ್ರಿ ಕೊಟ್ಟ ಒಪ್ಪೋ A2x ! ಈ ಫೋನ್‌ನಲ್ಲಿದೆ ಅಚ್ಚರಿಯ ಫೀಚರ್ಸ್!
ಒಪ್ಪೋ ಸಂಸ್ಥೆ ಹೊಸ ಒಪ್ಪೋ A2x ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ 5G ಸ್ಮಾರ್ಟ್‌ಫೋನ್ ಆಗಿದ್ದು, 90Hz ರಿಫ್ರೆಶ್ ರೇಟ್ ಬೆಂಬಲಿತ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6020 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಒಪ್ಪೋ A2x ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್ ವಿಶೇಷ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡುವ ಸೂಚನೆ ನೀಡಿದೆ. ಇದರಲ್ಲಿ ಬಳಕೆಯಾಗದ ಹೆಚ್ಚವರಿ ಸ್ಟೋರೇಜ್ ಬಳಸಿಕೊಂಡು 8GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ಕಾಣಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A2x ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A2x ಸ್ಮಾರ್ಟ್‌ಫೋನ್ 6.56-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹಾಗೂ 720 ನೀಟ್ಸ್ ವರೆಗಿನ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ ಈ ಡಿಸ್‌ಪ್ಲೇ 100% DCI-P3 ಕಲರ್ ಗ್ಯಾಮಟ್ ನೀಡುವ ಟಿಯರ್‌ಡ್ರಾಪ್ ನಾಚ್‌ನೊಂದಿಗೆ ಬರಲಿದೆ.
ಒಪ್ಪೋ A2x ಪ್ರೊಸೆಸರ್ ಯಾವುದು?
ಒಪ್ಪೋ A2x ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಹೊಂದಿದೆ. ಇದು ಕಲರ್‌ಒಎಸ್ 13.1 ಆಧಾರಿತ ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಹಾಗೂ 8GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಇದಲ್ಲದೆ ಬಳಕೆಯಾಗದ ಹೆಚ್ಚವರಿ ಸ್ಟೋರೇಜ್ ಬಳಸಿಕೊಂಡು 8GB ವರೆಗೆ ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
ಒಪ್ಪೋ A2x ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A2x ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ LED ಫ್ಲಾಶ್ ಕೂಡ ಬರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ನಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಇರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಒಪ್ಪೋ A2x ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒಪ್ಪೋ A2x ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಆದರೆ ಇದು ವೇಗದ ಚಾರ್ಜಿಂಗ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ IP54 ರೇಟಿಂಗ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, 5G ಬೆಂಬಲವನ್ನು ಸಹ ಹೊಂದಿದೆ.
ಒಪ್ಪೋ A2x ಬೆಲೆ ಮತ್ತು ಲಭ್ಯತೆ
ಒಪ್ಪೋ A2x ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್ 6GB RAM + 128 GB ಸ್ಟೋರೇಜ್ ಆಯ್ಕೆಯು 1,099 ಯುವಾನ್ (ಅಂದಾಜು 12,650ರೂ)ಬೆಲೆಯನ್ನು ಹೊಂದಿದೆ. ಇದರ 8GB RAM + 256GB ಸ್ಟೋರೇಜ್ ಆಯ್ಕೆಯು 1,399 ಯುವಾನ್ (ಅಂದಾಜು 16,104ರೂ)ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಖರೀದಿದಾರರು ಕಪ್ಪು, ಚಿನ್ನ ಮತ್ತು ನೇರಳೆ ಮುಂತಾದ ಕಲರ್ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಇದು ಭಾರತದಲ್ಲಿಯೂ ಸಹ ಬಿಡುಗಡೆ ಆಗಲಿದೆಯಾ ಎಂಬುದರ ಬಗ್ಗೆ ಕಂಪೆನಿ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.


Click it and Unblock the Notifications








