Home
ಸುದ್ದಿಜಾಲ

Oppo: ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! 67W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ... ಬೆಲೆ ಎಷ್ಟು?

ಒಪ್ಪೋ ಸ್ಮಾರ್ಟ್‌ಫೋನ್‌ಗಳು (Oppo Smartphones) ಸುಧಾರಿತ ಫೀಚರ್ಸ್‌ ಆಯ್ಕೆ ಮೂಲಕ ಬಳಕೆದಾರರಿಗೆ ವಿಶೇಷ ಅನುಭವ ನೀಡುತ್ತವೆ. ಈ ನಡುವೆ ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲಾಗಿದ್ದು, ಈ ಫೋನ್ 67W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

ಹೌದು, ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ (Oppo A3 Pro smartphone) ಅನ್ನು ಇದೀಗ ಅನಾವರಣ ಮಾಡಲಾಗಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, IP69 ರೇಟಿಂಗ್ ಅನ್ನು ಹೊಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಇದರ ಬೆಲೆ ಎಷ್ಟು ಅನ್ನೋ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! 67W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ..

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಒಪ್ಪೋ ಇದೀಗ ಚೀನಾ ಮಾರುಕಟ್ಟೆಯಲ್ಲಿ A3 ಪ್ರೊ ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಿದೆ. ಈ ಫೋನ್ ಒಪ್ಪೋ A2 ಪ್ರೊ ನ ಉತ್ತರಾಧಿಕಾರಿಯಾಗಿದೆ. ಈ ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯೊಂದಿಗೆ ಕಾಣಿಸಿಕೊಂಡಿದೆ. ಈ ಮೂಲಕ ಬಳಕೆದಾರರಿಗೆ ಉತ್ತಮವಾದ ವೀಕ್ಷಣೆ ಅನುಭವ ನೀಡಲಿದೆ.

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಈ ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂನಲ್ಲಿ ರನ್‌ ಆಗಲಿದ್ದು, ಇದು ಕಲರ್‌ಓಎಸ್‌ 14 ಅನ್ನು ಆಧರಿಸಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಈ ಫೋನ್‌ ಕಾರ್ಯನಿರ್ವಹಿಸಲಿದ್ದು, 12GB LPDDR4x RAM ಹಾಗೂ 512GB UFS 3.1 ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದುಕೊಂಡಿದೆ.

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! 67W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ..

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, 64 ಮೆಗಾಪಿಕ್ಸೆಲ್ ಪ್ರಾಥಮಿಕ ಶೂಟರ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಈ ಸೆನ್ಸರ್‌ಗಳು ವಿವಿಧ ಫೀಚರ್ಸ್‌ ಆಯ್ಕೆ ಪಡೆದುಕೊಂಡಿವೆ.

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 67W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇದು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದ್ದು, ಧೂಳು ಮತ್ತು ಹೆಚ್ಚಿನ-ತಾಪಮಾನದ ನೀರಿನ ಪ್ರತಿರೋಧಕ್ಕಾಗಿ IP69 ರೇಟಿಂಗ್‌ನೊಂದಿಗೆ ರಕ್ಷಿಸಲ್ಪಟ್ಟಿದೆ. ಇದರ ಜೊತೆಗೆ ಈ ಫೋನ್ 5G, ಬ್ಲೂಟೂತ್ ಆವೃತ್ತಿ 5.3, ವೈ-ಫೈ 6 ಮತ್ತು ಜಿಪಿಎಸ್‌ ಅನ್ನ ಬೆಂಬಲಿಸಿದೆ.

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! 67W ಫಾಸ್ಟ್ ಚಾರ್ಜಿಂಗ್‌ ಸೌಲಭ್ಯ..

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ: A3 ಪ್ರೊ ಸ್ಮಾರ್ಟ್‌ಫೋನ್‌ನ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ CNY 1,999 (23,065 ರೂ.ಗಳು) ಬೆಲೆ ನಿಗದಿ ಮಾಡಲಾಗಿದೆ. 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಫೋನ್‌ ಕ್ರಮವಾಗಿ CNY 2,199 (25,373 ರೂ.ಗಳು) ಮತ್ತು CNY 2,499 (28,834ರೂ.ಗಳು) ಬೆಲೆ ನಿಗದಿ ಮಾಡಲಾಗಿದೆ. ಇದನ್ನು ಏಪ್ರಿಲ್ 19 ರಿಂದ ಖರೀದಿ ಮಾಡಬಹುದಾಗಿದೆ. ಜೊತೆಗೆ ಈ ಫೋನ್ ಕ್ಲೌಡ್ ಬ್ರೋಕೇಡ್ ಪೌಡರ್, ಅಜುರೆ ಮತ್ತು ಮೌಂಟೇನ್ ಬ್ಲೂ ಬಣ್ಣದ ಮೂರು ಆಯ್ಕೆಯಲ್ಲಿ ಲಭ್ಯ ಇದೆ. ಶೀಘ್ರದಲ್ಲೇ ಭಾರತಕ್ಕೆ ಕಾಲಿಡುವ ನಿರೀಕ್ಷೆ ಇದೆ.

Best Mobiles in India

English summary
Oppo A3 Pro smartphone is powered by the MediaTek Dimensity 7050 processor and has an IP69 rating.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+