ಒಪ್ಪೋದಿಂದ ಒಪ್ಪೋ A31 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಪ್ರತಿವರ್ಷದಂತೆ ಈ ವರ್ಷವೂ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ನಡೆಯುತ್ತಿದೆ. MWC2020 ಸಮ್ಮೇಳನದ ಮೇಲೆ ಕೊರೊನಾ ವೈರಸ್‌ ಕಾರ್ಮೋಡದ ನಡುವೆಯೂ ಸ್ಮಾರ್ಟ್‌ಫೋನ್‌ ಕಂಪೆನಿಗಳು ತಮ್ಮ ಹೊಸ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡುತ್ತಿವೆ. ಸದ್ಯ ಈಗಾಗ್ಲೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿಭಿನ್ನ ಫೀಚರ್ಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಒಪ್ಪೋ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ಒಪ್ಪೋ ತನ್ನ ಹೊಸ ಆವೃತ್ತಿಯ ಒಪ್ಪೋ A31 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಹಾಗಂತ ಈ ಸ್ಮಾರ್ಟ್‌ಫೋನ್‌ 2015ರಲ್ಲಿ ಬಿಡುಗಡೆಯಾಗಿದ್ದ ಒಪ್ಪೋ A31 ಅಲ್ಲ, ಇವರೆಡರ ನಡುವೆ ತುಂಬಾ ಅಂತರವಿದ್ದು, ಇದು ಮಿಡ್‌ರೇಂಜ್‌ ಬಜೆಟ್‌ ನ ಸ್ಮಾರ್ಟ್‌ಫೋನ್‌ ಆಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಮಾತ್ರ ಬಿಡುಗಡೆ ಮಾಡಲಾಗಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಒಪ್ಪೋ A31 (2020) ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5-ಇಂಚಿನ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಬೆಜೆಲ್‌ಲೆಸ್‌ ಡಿಸ್‌ಪ್ಲೇ ಆಗಿದ್ದು, ವಾಟರ್‌ಡ್ರಾಪ್‌ ನಾಚ್‌ಶೈಲಿಯ ವಿನ್ಯಾಸವನ್ನು ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇ 82.43% ಸ್ಕ್ರೀನ್‌ ಟು ಬಾಡಿ ರೆಶೀಯೋ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 270 PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಇದರ ಆಸ್ಪೆಕ್ಟ್‌ ರೆಶೀಯೋ 20.9 ಹೊಂದಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್, 2.3 GHz, ಕಾರ್ಟೆಕ್ಸ್ A53 ಹೊಂದಿರುವ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೂ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಒಪ್ಪೋ A31 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 12ಮೆಗಾ ಪಿಕ್ಸೆಲ್‌ ಹೊಂದಿರುವ ವೈಡ್ ಆಂಗಲ್ ಲೆನ್ಸ್‌,ಎರಡನೇ ಹಾಗೂ ಮೂರನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಡೆಪ್ತ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದ್ದು, ವೀಡಿಯೋ ಕಾಲ್‌ ನಲ್ಲಿ ಉತ್ತಮ ಅನುಭವವನ್ನು ನೀಡಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4230mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, ವೇಗದ ಚಾರ್ಜಿಂಗ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ನೆಟ್‌ವರ್ಕ್‌ ಆಧಾರಿತ ಡ್ಯುಯೆಲ್‌ ಸಿಮ್‌, ವೈಫೈ, ಬ್ಲೂಟೂತ್‌ v5.0, ಜಿಪಿಎಸ್‌, ಯುಎಸ್‌ಬಿ ಚಾರ್ಜಿಂಗ್‌ ಫೋರ್ಟಲ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೊ A31 ಸ್ಮಾರ್ಟ್‌ಫೋನ್‌ ಬೆಲೆ IDR 25,99,000 (ಅಂದಾಜು 13,500 ರೂ.) ಆಗಿದ್ದು, ಇದು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದನ್ನು ಲಾಜಾಡಾ, ಶೋಪೀ, ಟೊಕೊಪೀಡಿಯಾ, ಜೆಡಿಐಡಿ, ಬ್ಲಿಬ್ಲಿ, ಮತ್ತು ಅಕುಲಾಕು ಸೇರಿದಂತೆ ಇತರೆ ಆನ್‌ಲೈನ್ ಮಳಿಗೆಗಳ ಮೂಲಕ ಮಾರಾಟ ಮಾಡಲಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಮಿಸ್ಟರಿ ಬ್ಲ್ಯಾಕ್ ಮತ್ತು ಫ್ಯಾಂಟಸಿ ವೈಟ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Oppo A31 price is set at IDR 25,99,000 (roughly Rs. 13,500) in Indonesia.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X