Oppo A31: ಒಪ್ಪೊದ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗ!

|

ಚೀನಾ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ ಒಪ್ಪೊ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಒಪ್ಪೊ A31 ಅನ್ನು ಮಾರುಕಟ್ಟೆಗೆ ಪರಿಚಯಿಸಲು ಸಿದ್ದತೆ ನಡೆಸಿದೆ. ಈಗಾಗಲೇ ವೈವಿಧ್ಯಮಯ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದಿರುವ ಒಪ್ಪೊ, ಈಗ ಒಪ್ಪೊ A31 ಮೂಲಕ ಹೊಸ ಸಂಚಲನ ಸೃಷ್ಟಿಸುವ ಭರವಸೆ ಮೂಡಿಸಿದೆ. ಇದೆ. ಸದ್ಯ ಬಿಡುಗಡೆಗೆ ಸಿದ್ಧವಾಗಿರುವ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನು ಅನ್ನೊದು ಲೀಕ್‌ ಆಗಿದೆ.

ಹೌದು

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸದಾ ಹೊಸತನಕ್ಕೆ ಸಾಕ್ಷಿಯಾಗಿರುವ ಒಪ್ಪೊ ಕಂಪೆನಿ, ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಒಪ್ಪೊ A31 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಒಪ್ಪೊ A31 ಅಥವಾ ಒಪ್ಪೊ ರೆನೋ s ಎಂದು ಹೆಸರಿಸುವ ಸಾದ್ಯತೆ ಇದ್ದು, ಈ ಸ್ಮಾರ್ಟ್‌ಫೋನ್ನ ಮಾಡೆಲ್‌ ನಂಬರ್‌ CPH2015 ಎಂದು ಹೇಳಲಾಗ್ತಿದೆ. ಅಷ್ಟಕ್ಕೂ ಲೀಕ್‌ ಮಾಹಿತಿ ಪ್ರಕಾರ ಒಪ್ಪೊ A31 ಅಥವಾ ಒಪ್ಪೊ ರೆನೋ s ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೋ A31 ಸ್ಮಾರ್ಟ್‌ಫೋನ್‌ 1600×900 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌5 ಮತ್ತು ವಾಟರ್‌ಡ್ರಾಪ್‌ ಸ್ಟೈಲ್‌ ನಾಚ್‌ ಡಿಸೈನ್‌ ಒಳಗೊಂಡಿರುವ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌ ಹೊಂದಿರುವುದರಿಂದ ವಿಡಿಯೋ ವಿಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ 2.0GHz ಮೀಡಿಯಾ ಟೆಕ್ ಆಕ್ಟಾ-ಕೋರ್ ಪವರ್‌ ಹೊಂದಿರುವ ಮೀಡಿಯಾ ಟೆಕ್ ಹೆಲಿಯೊ ಪಿ60 ಪ್ರೊಸೆಸರ್‌ ಹೊಂದಿದ್ದು ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ, 4 GB RAM ಮತ್ತು 128 GB ಸಂಗ್ರಹ ಸಾಮರ್ಥ್ಯವನ್ನ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಮೂರು ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನ ಒಳಗೊಂಡಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಪಿ ಕ್ಯಾಮೆರಾ ವನ್ನು ನೀಡಲಾಗಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕ್ಯಾಮೆರಾಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲಾಶ್, ಟಚ್‌ ಟು ಫೋಕಸ್‌ಫೀಚರ್ಸ್‌ಗಳನ್ನ ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೊ A31 ಸ್ಮಾರ್ಟ್‌ಫೋನ್‌ 4230mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು 10w ಸಪೋರ್ಟ್‌ನಲ್ಲಿ ಚಾರ್ಜಿಂಗ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ 5.0, ವೈಫೈ, 4G LTE ನೆಟ್‌ವರ್ಕ್‌ ಅನ್ನ ಬೆಂಬಲಿಸಲಿದೆ. ಜೊತೆಗೆ 3.5 ಮಿ ಉದ್ದದ ಹೆಡ್‌ಪೋನ್‌, ಹಾಗೂ ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನ ಸಹ ಫೋನ್‌ ಜೊತೆಗೆ ನೀಡಲಾಗುತ್ತೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಹ ಹೇಳಲಾಗ್ತಿದೆ.

Best Mobiles in India

English summary
The phone might also be called the Oppo Reno S, based on certain specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X