Home
ಸುದ್ದಿಜಾಲ

ಬಜೆಟ್ ಬೆಲೆಯಲ್ಲಿ 'ಒಪ್ಪೊ A31' ಸ್ಮಾರ್ಟ್‌ಫೋನ್‌ ಬಿಡುಗಡೆ!

ಚೀನಾ ಮೂಲದ ಜನಪ್ರಿಯ ಮೊಬೈಲ್ ಸಂಸ್ಥೆ ಒಪ್ಪೊ ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ 'ಒಪ್ಪೊ A31' ಸ್ಮಾರ್ಟ್‌ಫೋನ್‌ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬಜೆಟ್ ಪ್ರೈಸ್‌ಟ್ಯಾಗ್ನಲ್ಲಿಯೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಒಪ್ಪೊ, ಈ ಹೊಸ ಫೋನ್‌ ಅನ್ನು ಸಹ ಬಜೆಟ್ ಬೆಲೆಯಲ್ಲಿಯೇ ಲಾಂಚ್ ಮಾಡಿದೆ. ಆದರೆ ಈ ಫೋನ್‌ ಇತ್ತೀಚಿನ ಟ್ರೆಂಡಿಂಗ್‌ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಗ್ರಾಹಕರನ್ನು ಆಕರ್ಷಿಸುವಂತಿವೆ.

ಒಪ್ಪೊ A31

ಹೌದು, ಒಪ್ಪೊ ಸಂಸ್ಥೆಯು ತನ್ನ ಹೊಸ 'ಒಪ್ಪೊ A31' ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಫ್ಯಾಂಟಸಿ ವೈಟ್ ಮತ್ತು ಮೈಸ್ಟ್ರಿ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 11,490ರೂ.ಆಗಿದೆ. ಒಪ್ಪೊ A31 ಸ್ಮಾರ್ಟ್‌ಫೋನಿನ ಇನ್ನಿತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್ ಮತ್ತು ರಚನೆ

ಡಿಸ್‌ಪ್ಲೇ ಡಿಸೈನ್ ಮತ್ತು ರಚನೆ

ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಮಾದರಿಯನ್ನು ಪಡೆದಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.89% ಆಗಿದೆ. ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ 3 ಅನ್ನು ಪಡೆದಿದೆ.

ಪ್ರೊಸೆಸರ್ ಬಲವೇನು

ಪ್ರೊಸೆಸರ್ ಬಲವೇನು

ಒಪ್ಪೊ A31 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್‌ ಹಾಗೂ ಕಲರ್ ಓಎಸ್ 6 ಸಪೋರ್ಟ್‌ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB+128GB ವೇರಿಯಂಟ್ ಆಯ್ಕೆ ಹೊಂದಿದ್ದು, ಎಸ್‌ಡಿ ಕಾರ್ಡ್ ಮೂಲಕ 256GB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒಪ್ಪೊ A31 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಹೊಂದಿದ್ದು, ಹಾಗೂ ತೃತೀಯ ಕ್ಯಾಮೆರಾ ಸಹ 2ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಒಪ್ಪೊ A31 ಸ್ಮಾರ್ಟ್‌ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒದಗಿಸಲಿದೆ. ಒಮ್ಮೆ ಬ್ಯಾಟರಿ ಪೂರ್ಣ ಚಾರ್ಜ್ ಆದರೇ 45 ಗಂಟೆಗಳ ಟಾಕ್‌ಟೈಮ್ ಬ್ಯಾಕ್‌ಅಪ್ ನೀಡುತ್ತದೆ. 8 ಗಂಟೆಗಳ ವಿಡಿಯೊ ಪ್ಲೇಬ್ಯಾಕ್ ಒದಗಿಸುತ್ತದೆ ಹಾಗೂ 35ಗಂಟೆಗಳ ಆಡಿಯೋ ಪ್ಲೇ ಬ್ಯಾಕ್ ಬ್ಯಾಕ್‌ಅಪ್ ನೀಡುತ್ತದೆ ಎಂದು ಕಂಪನಿಯು ಹೇಳಿಕೊಂಡಿದೆ.

ಬೆಲೆ ಎಷ್ಟು

ಬೆಲೆ ಎಷ್ಟು

ಒಪ್ಪೊ A31 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ವೇರಿಯಂಟ್‌ಗಳಲ್ಲಿ ಲಾಂಚ್ ಆಗಿದೆ. 4GB+64GB ಸ್ಟೋರೇಜ್‌ನ ಬೇಸಿಕ್ ವೇರಿಯಂಟ್ ಬೆಲೆಯು 11,490ರೂ. ಆಗಿದ್ದು, ಹಾಗೆಯೇ 6GB+128GB ಸ್ಟೋರೇಜ್ ವೇರಿಯಂಟ್ ದರವು 13,990ರೂ.ಗಳು ಆಗಿದೆ. ಫ್ಯಾಂಟಸಿ ವೈಟ್ ಮತ್ತು ಮೈಸ್ಟ್ರಿ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತಿದೆ.

Best Mobiles in India

English summary
Oppo A31 smartphone comes powered with MediaTek Helio P35 chipset, paired with PowerVR GE8320 GPU.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+