ಒಪ್ಪೋ ಸಂಸ್ಥೆಯಿಂದ ಹೊಸದಾಗಿ A32 ಸ್ಮಾರ್ಟ್‌ಫೋನ್ ಲಾಂಚ್!
ಒಪ್ಪೋ ಸಂಸ್ಥೆಯು ಹೊಸದಾಗಿ ಒಪ್ಪೋ A32 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾರುಕಟ್ಟೆಗೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 460 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.

ಹೌದು, ಒಪ್ಪೋ ಕಂಪನಿಯು ಒಪ್ಪೋ ಹೊಸದಾಗಿ ಚೀನಾದಲ್ಲಿ ಒಪ್ಪೋ A32 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಫೋನ್ 4GB + 128GB ಹಾಗೂ 8GB + 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನಿನ ತ್ರಿವಳಿ ಕ್ಯಾಮೆರಾ ಸೆನ್ಸಾರ್ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ರಚನೆ
ಒಪ್ಪೋ A32 ಸ್ಮಾರ್ಟ್‌ಫೋನ್ ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು 90Hz ಸ್ಕ್ರೀನ್ ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು
ಒಪ್ಪೋ A32 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 460 SoC ಪ್ರೊಸೆಸರ್ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB + 128GB ಹಾಗೂ 8GB + 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ತ್ರಿವಳಿ ಕ್ಯಾಮೆರಾ
ಒಪ್ಪೋ A32 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿವೆ. ಜೊತೆಗೆ 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲಾಶ್, ಟಚ್ ಟು ಫೋಕಸ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A32 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು'?
ಒಪ್ಪೋ A32 ಸ್ಮಾರ್ಟ್‌ಫೋನ್ 4GB + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,199 (ಭಾರತದಲ್ಲಿ ಅಂದಾಜು 12,880ರೂ) ಹಾಗೂ 8GB + 128GB ವೇರಿಯಂಟ್ ದರವು CNY 1,499 (ಭಾರತದಲ್ಲಿ ಅಂದಾಜು 16,100ರೂ)


Click it and Unblock the Notifications








