ಒಪ್ಪೊ A35 ಸ್ಮಾರ್ಟ್‌ಫೋನ್ ಲಾಂಚ್!..ಟ್ರಿಪಲ್ ಕ್ಯಾಮೆರಾ ಹೈಲೈಟ್‌!

|

ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಣದಾಗಿರುವ ಒಪ್ಪೋ ಸಂಸ್ಥೆಯು A ಸರಣಿಯಲ್ಲಿ ಈಗಾಗಲೇ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಅದೇ ಸರಣಿಯಲ್ಲಿ ಇದೀಗ ಮಾರುಕಟ್ಟೆಗೆ ಒಪ್ಪೊ A35 ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಓಎಸ್‌ ಹಾಗೂ 4230mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಹೊಸದಾಗಿ

ಹೌದು, ಒಪ್ಪೊ ಕಂಪನಿಯು ಒಪ್ಪೋ ಹೊಸದಾಗಿ ಒಪ್ಪೊ A35 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್ 4GB RAM ಮತ್ತು 128GB ಆಂತರಿಕ ಸ್ಟೋರೇಜ್‌ನ ಒಂದೇ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಡಿಸ್‌ಪ್ಲೇಯು 60Hz ರೀಫ್ರೇಶ್‌ ರೇಟ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಫೋಗಿ ಸೀ ಬ್ಲೂ, ಗ್ಲಾಸ್ ಬ್ಲ್ಯಾಕ್ ಮತ್ತು ಐಸ್ ಜೇಡ್ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಒಪ್ಪೊ A35 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಒಪ್ಪೊ A35 ಸ್ಮಾರ್ಟ್‌ಫೋನ್‌ 720×1600 ಪಿಕ್ಸೆಲ್‌ ಸ್ಕ್ರಿನ್ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು, ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ಡಿಸ್‌ಪ್ಲೇ 269ppi ಪಿಕ್ಸೆಲ್‌ ಸಾಂದ್ರತೆ ಯನ್ನ ಒಳಗೊಂಡಿದ್ದು, 480 nits ಬ್ರೈಟ್ನೆಸ್‌ ಅನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಒಪ್ಪೊ A35 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ 2.3GHz, ಕಾರ್ಟೆಕ್ಸ್‌A53 ಒಳಗೊಂಡಿರುವ ಮೀಡಿಯಾ ಟೆಕ್‌ ಹಿಲಿಯೋ P35 ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ColorOS 7.2 ಸಪೋರ್ಟ್‌ನೊಂದಿಗೆ ಆಂಡ್ರಾಯ್ಡ್ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 128GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸುವ ಆಯ್ಕೆ ಇದೆ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ಒಪ್ಪೊ A35 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ತೃತೀಯ ಕ್ಯಾಮೆರಾವು ಸಹ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲಾಶ್‌, ಟಚ್‌ ಟು ಫೋಕಸ್‌ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೊ A35 ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. 10W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆಯನ್ನು ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಒಪ್ಪೊ A35 ಸ್ಮಾರ್ಟ್‌ಫೋನ್‌ 4GB + 128GB ಸ್ಟೋರೇಜ್‌ನ ಸಿಂಗಲ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಚೀನಾದಲ್ಲಿ ಇದರ ಬೆಲೆಯು CNY 1,299 ಆಗಿದೆ. (ಭಾರತದಲ್ಲಿ ಅಂದಾಜು 14,900ರೂ. ಎನ್ನಲಾಗಿದೆ). ಈ ಫೋನ್ ಫೋಗಿ ಸೀ ಬ್ಲೂ, ಗ್ಲಾಸ್ ಬ್ಲ್ಯಾಕ್ ಮತ್ತು ಐಸ್ ಜೇಡ್ ವೈಟ್ ಕಲರ್ ಆಯ್ಕೆಗಳನ್ನು ಪಡೆದಿದೆ. ಈ ಫೋನ್ ಭಾರತದಲ್ಲಿ ಲಭ್ಯತೆ ಬಗ್ಗೆ ಮಾಹಿತಿ ಸ್ಪಷ್ಟಪಡಿಸಿಲ್ಲ.

Best Mobiles in India

English summary
Oppo A35 is an entry-level smartphone that comes with a 6.52-inch IPS LCD HD+ display.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X