Home
ಸುದ್ದಿಜಾಲ

ಒಪ್ಪೋ A36 ಸ್ಮಾರ್ಟ್‌ಫೋನ್‌ ಬಿಡುಗಡೆ! ಪ್ರೊಸೆಸರ್‌ ಹೇಗಿದೆ?

ಒಪ್ಪೋ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿದೆ. ವಿಶೇಷ ಕ್ಯಾಮೆರಾ ವಿನ್ಯಾಸ ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ A36 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್ ಸ್ನೇಹಿ ಆಗಿದ್ದು, 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಆಧಾರಿತ ColorOS 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಒಪ್ಪೋ A36 ಸ್ಮಾರ್ಟ್‌ಫೋನ್‌

ಹೌದು, ಒಪ್ಪೋ ಕಂಪೆನಿ ಒಪ್ಪೋ ಹೊಸ A36 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52 ಇಂಚಿನ LCD HD+ ಡಿಸ್‌ಪ್ಲೇ ಹೊಂದಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಒದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ ಹೊಸ A36 ಸ್ಮಾರ್ಟ್‌ಫೋನ್‌ 1,600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ LCD HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್‌ ಸ್ಯಾಂಪಲ್‌ ರೇಟ್‌ ಅನ್ನು ಹೊಂದಿದೆ. ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 89.9 % ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್‌ ಒಎಸ್‌ 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಫೀಚರ್ಸ್‌

ಕ್ಯಾಮೆರಾ ಫೀಚರ್ಸ್‌

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A36 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 20,000 USB ಪ್ಲಗ್‌ಗಳು ಮತ್ತು ಅನ್‌ಪ್ಲಗ್‌ಗಳು, 150,000 ವಾಲ್ಯೂಮ್ ರಾಕರ್ ಕ್ಲಿಕ್‌ಗಳು ಮತ್ತು 500,000 ಪವರ್ ಬಟನ್ ಕ್ಲಿಕ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A36 ಸ್ಮಾರ್ಟ್‌ಫೋನ್ ಚೀನಾದಲ್ಲಿ CNY 1,599 (ಅಂದಾಜು 18,500ರೂ.)ಬೆಲೆಯನ್ನು ಹೊಂದಿದೆ. ಇದು ಒಪ್ಪೋ ಆನ್‌ಲೈನ್‌ನಲ್ಲಿ ಮುಂಗಡ ಬುಕಿಂಗ್‌ಗೆ ಲಭ್ಯವಿದ್ದು, ಜನವರಿ 14 ರಿಂದ ಮಾರಾಟವಾಗಲಿದೆ. ಈ ಫೋನ್‌ ನೀಲಿ ಮತ್ತು ಕಪ್ಪು ಎಂಬ ಎರಡು ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ.

ಒಪ್ಪೋ A16K ಸ್ಮಾರ್ಟ್‌ಫೋನ್‌

ಇದಲ್ಲದೆ ಒಪ್ಪೋ ಕಂಪೆನಿ ಭಾರತದಲ್ಲಿ (ಜ.12) ಹೊಸದಾಗಿ ಒಪ್ಪೋ A16K ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 60Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.52-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ColorOS 11.1 Lite ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

Best Mobiles in India

English summary
Oppo A36 is powered by a Snapdragon 680 SoC paired with 8GB of RAM and 256GB of onboard storage.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+