Home
ಸುದ್ದಿಜಾಲ

ಭಾರತಕ್ಕೆ ಗ್ರ್ಯಾಂಡ್‌ ಎಂಟ್ರಿ ನೀಡಿದ ಒಪ್ಪೋ A38 ಸ್ಮಾರ್ಟ್‌ಫೋನ್‌.. ಇದರ ಬೆಲೆ ಯಾಕಿಷ್ಟು ಕಡಿಮೆ!

ಭಾರತದಲ್ಲಿ ಹೊಸತನದ ಸ್ಮಾರ್ಟ್‌ಫೋನ್‌ಗಳಿಗೆ ಒಪ್ಪೋ ಕಂಪೆನಿ ಹೆಸರುವಾಸಿಯಾಗಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವಲ್ಲಿ ಒಪ್ಪೋ ಕಂಪೆನಿ ಸೈ ಎನಿಸಿಕೊಂಡಿದೆ. ಇದೀಗ ಒಪ್ಪೋ ಕಂಪೆನಿ ಹೊಸ ಒಪ್ಪೋ A38 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಒಪ್ಪೋ A38 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಬರಲಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಸೌಂಡ್‌ ಮಾಡ್ತಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಗ್ರ್ಯಾಂಡ್‌ ಎಂಟ್ರಿ ನೀಡಿದ ಒಪ್ಪೋ A38 ಸ್ಮಾರ್ಟ್‌ಫೋನ್‌!

ಒಪ್ಪೋ A38 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A38 ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 720 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇ 84.2% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಒಪ್ಪೋ A38 ಪ್ರೊಸೆಸರ್‌ ಯಾವುದು?
ಒಪ್ಪೋ A38 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ColorOS 13.1 ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಒಪ್ಪೋ A38 ಕ್ಯಾಮೆರಾ ಸೆಟ್‌ಅಪ್‌
ಒಪ್ಪೋ A38 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI-ಬೆಂಬಲಿತ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್ಇಡಿ ಫ್ಲ್ಯಾಷ್, ಎಚ್ಡಿಆರ್, ಪನೋರಮಾ ಆಯ್ಕೆಗಳನ್ನು ನೀಡಲಾಗಿದೆ. ಇದರಲ್ಲಿ 1080p@30fpsನಲ್ಲಿ ವೀಡಿಯೊ ರೆಕಾರ್ಡಿಂಗ್‌ ಮಾಡಬಹುದಾಗಿದೆ.

ಒಪ್ಪೋ A38 ಬ್ಯಾಟರಿ ಮತ್ತು ಇತರೆ
ಒಪ್ಪೋ A38 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 5, ಬ್ಲೂಟೂತ್ 5.3, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಸಹ ಬೆಂಬಲಿಸಲಿದೆ.

ಒಪ್ಪೋ A38 ಬೆಲೆ ಮತ್ತು ಲಭ್ಯತೆ
ಒಪ್ಪೋ A38 ಸ್ಮಾರ್ಟ್‌ಫೋನ್‌ ಭಾರತದಲ್ಲಿ 12,999ರೂ. ಬೆಲೆಯನ್ನು ಹೊಂದಿದೆ. ಇದನ್ನು ಒಪ್ಪೋದ ಅಧೀಕೃತ ವೆಬ್‌ಸೈಟ್‌ನಲ್ಲಿ ಇಂದಿನಿಂದಲೇ ಮುಂಗಡ-ಆರ್ಡರ್ ಮಾಡಬಹುದು. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಇದೇ ಸೆಪ್ಟೆಂಬರ್ 13ರಿಂದ ಸೇಲ್‌ ಆಗಲಿದೆ. ಸ್ಮಾರ್ಟ್‌ಫೋನ್‌ ಗ್ಲೋಯಿಂಗ್ ಗೋಲ್ಡ್ ಮತ್ತು ಗ್ಲೋಯಿಂಗ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Oppo A38 With MediaTek Helio G70 SoC Launched in India: Price and sepcs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+