ಇಂದು ಭಾರತಕ್ಕೆ OPPO A5 Pro 5G ಗ್ರ್ಯಾಂಡ್ ಎಂಟ್ರಿ; ನಿರೀಕ್ಷಿತ ಬೆಲೆ ಮತ್ತು ಫೀಚರ್ಸ್‌ಗಳೇನು?
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪನಿ ಒಪ್ಪೋ (OPPO) ಇಂದು ತನ್ನ ಹೊಚ್ಚ ಹೊಸ ಪೋನನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಅಲ್ಲದೆ, ಬಿಡುಗಡೆಗೂ ಮುಂಚೆಯೇ ಕೆಲವು ಇಂಟ್ರೆಸ್ಟಿಂಗ್ ಫೀಚರ್‌ಗಳನ್ನು ಬಹಿರಂಗಪಡಿಸಿದೆ. ಹೌದು, ಕಂಪನಿಯು ಇಂದು (ಏಪ್ರಿಲ್ 24) ಒಪ್ಪೋ A5 ಪ್ರೊ 5G (OPPO A5 Pro 5G) ಫೋನನ್ನು ಅಧಿಕೃತವಾಗಿ ರಿಲೀಸ್ ಮಾಡಲಿದೆ. ಇದು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ. ಈ ಹೊಸ ಫೋನಿನ ನಿರೀಕ್ಷಿತ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಒಪ್ಪೋ A5 ಪ್ರೊ 5G ಮೊಬೈಲ್ ಈಗಾಗಲೇ ಚೀನಾದಲ್ಲಿ ಬಿಡುಗಡೆಯಾಗಿದ್ದು, ಇದೀಗ ಭಾರತಕ್ಕೆ ಬರುತ್ತಿದೆ. ಮುಂಬರುವ ಈ ಫೋನನ್ನು ಕಂಪನಿಯು ತನ್ನ 'A' ಸರಣಿಯಲ್ಲಿ ತರುತ್ತಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ 8GB RAM + 256GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 45W ವೇಗದ ಚಾರ್ಜ್ ಸೇರಿದಂತೆ ಹಲವು ವೈಶಿಷ್ಟ್ಯಗಳು ಲಭ್ಯವಿದೆ.

ಒಪ್ಪೋ A5 ಪ್ರೊ 5G ಬಿಡುಗಡೆ ಸಮಯ
ಕಂಪನಿಯು ಈಗಾಗಲೇ ಒಪ್ಪೋ A5 ಪ್ರೊ 5G ಫೋನಿನ ಫೋಟೋ ಮತ್ತು ಪ್ರಮುಖ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಿದೆ. ಇಂದು (ಏಪ್ರಿಲ್ 24) ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಲಾಂಚ್ ಈವೆಂಟ್ ಮೂಲಕ ಈ ಫೋನನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಇದೇ ವೇಳೆ ನೂತನ ಒಪ್ಪೋ 5G ಸ್ಮಾರ್ಟ್‌ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ಬಹಿರಂಗಪಡಿಸಲಾಗುವುದು.
ಒಪ್ಪೋ A5 ಪ್ರೊ 5G ಬೆಲೆ (ನಿರೀಕ್ಷಿತ)
ಒಪ್ಪೋ A5 ಪ್ರೊ 5G ಫೋನ್ ಪ್ರತ್ಯೇಕವಾಗಿ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್ಕಾರ್ಟ್ ಮೂಲಕ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈ ಒಪ್ಪೋ 5G ಫೋನಿನ ಬೆಲೆ 17,999 ರೂ. (15,000 ರೂ.)ನಿಂದ ಪ್ರಾರಂಭವಾಗಲಿದೆ. ಇದು 8GB RAM+ 128GB ಸ್ಟೋರೇಜ್ ರೂಪಾಂತರವನ್ನು ಹೊಂದಿರುವ ಫೋನಿನ ಬೆಲೆಯಾಗಿದೆ. ಇನ್ನು 8GB RAM + 256GB ಸ್ಟೋರೇಜ್ ವೇರಿಯಂಟ್ 19,999 ರೂ.ಗೆ ಲಭ್ಯವಿರುತ್ತದೆ.

ಒಪ್ಪೋ A5 ಪ್ರೊ 5G: ಟಾಪ್ 5 ವೈಶಿಷ್ಟ್ಯಗಳು
1. ಡಿಸ್ಪ್ಲೇ ಮಾಹಿತಿ
ಒಪ್ಪೋ A5 ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 1,604 × 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ.
2. ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ A5 ಪ್ರೊ 5G ಫೋನಿನಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾ-ಕೋರ್ ಪ್ರೊಸೆಸರ್ ಅಳವಡಿಸಲಾಗಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಕಲರ್ ಓಎಸ್ 15 ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6GB RAM + 128GB ಸ್ಟೋರೇಜ್ ಮತ್ತು 8GB RAM + 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
3. ಕ್ಯಾಮೆರಾ ಸೆಟಪ್
ಒಪ್ಪೋ A5 ಪ್ರೊ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
4. ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ A5 ಪ್ರೊ 5G ಸ್ಮಾರ್ಟ್‌ಫೋನ್ 5800mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಇದು 45W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಈ ಫೋನನ್ನು 6,000mAh ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಾಗಿದೆ.
5. ಇತರೆ ವೈಶಿಷ್ಟ್ಯಗಳು
ಒಪ್ಪೋ A5 ಪ್ರೊ 5G ಅನ್ನು ಕಂಪನಿಯು 'ಜಲನಿರೋಧಕ ಫೋನ್' ಎಂದು ಕರೆದಿದೆ. ಈ ಮೊಬೈಲ್ IP69 ರೇಟಿಂಗ್ ಹೊಂದಿದೆ. ನೀರು, ಮಣ್ಣು, ಶಾಖ, ಶೀತ ಮತ್ತು ಧೂಳಿನಿಂದ ರಕ್ಷಣೆ ಪಡೆದಿದೆ. ಇದು ಭದ್ರತೆ ಮತ್ತು ಅನ್‌ಲಾಕಿಂಗ್‌ಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಈ ಫೋನ್ ಬ್ಲೂಟೂತ್ 5.3, ವೈ-ಫೈ 5, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








