ಒಪ್ಪೋ A52 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕವೇ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವ ಕಂಪೆನಿಗಳಲ್ಲಿ ಒಪ್ಪೊ ಕೂಡ ಒಂದು. ಇನ್ನು ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ಸ್ಮಾರ್ಟ್‌ಫೋನ್‌ಗಳಲ್ಲಿ ಹೊಸ ವಿನ್ಯಾಸದ ಕ್ಯಾಮೆರಾ ಸೆಟ್‌ಅಪ್, ಹೊಸ ಆಕರ್ಷಕ ಫೀಚರ್ಸ್, ಡಿಸ್‌ಪ್ಲೇ ವಿನ್ಯಾಸದಲ್ಲಿ ಹೊಸತನ ಹೀಗೆ ಹಲವು ಹೊಸತುಗಳಿಗೆ ಒಪ್ಪೊ ಸಾಕ್ಷಿಯಾಗಿದೆ. ಸದ್ಯ ಒಪ್ಪೊ A92 ಸ್ಮಾರ್ಟ್‌ಫೋನ್ ಪರಿಚಯಿಸಿ ಸಂಚಲನ ಸೃಷ್ಟಿಸಿರುವ ಒಪ್ಪೊ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿಕೊಳ್ತಿದೆ.

ಹೌದು, ಚೀನಾದ ಸ್ಮಾರ್ಟ್‌ಫೋನ್ ತಯಾರಕ ಒಪ್ಪೊ ಚೀನಾ ಮಾರುಕಟ್ಟೆಯಲ್ಲಿ ಒಪ್ಪೊ A92 ಪರಿಚಯಿಸಿ ಸಂಚಲನ ಸೃಷ್ಟಿಸಿದೆ. ಇದರ ನಡುವೆಯೆ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಒಪ್ಪೊ A52 ಬಿಡುಗಡೆಗೆ ತಯಾರಿ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚೀನಾದ ವೆಬ್‌ಸೈಟ್‌ಗಳಲ್ಲಿ ವರದಿಯಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದು ಕೂಡ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒಪ್ಪೋ A52 ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿರಲಿದ್ದು, ಫುಲ್ ಹೆಚ್‌ಡಿ ಪ್ಲಸ್ ರೆಸಲ್ಯೂಶನ್ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಅಲ್ಲದೆ ಈ ಡಿಸ್‌ಪ್ಲೇ ಪಂಚ್ ಹೋಲ್ ಕ್ಯಾಮೆರಾ ಡಿಸೈನ್ ಅನ್ನು ಹೊಂದಿರಲಿದೆ. ಇನ್ನು ಇದರ ರಿಫ್ರೆಶ್ ರೇಟ್ ಕೂಡ ಉತ್ತಮವಾಗಿದ್ದು, ಪಿಕ್ಸೆಲ್ ಸಾಂದ್ರತೆ ಕುಡ ಎಂದಿನಂತೆ ಇರುವ ಸಾದ್ಯತೆ ಕೂಡ ಇದೆ. ಸದ್ಯ ಈ ಸ್ಮಾರ್ಟ್‌ಫೋನ್ ಪಿಡಿಎಎಂ 10 ಮಾದರಿ ಸಂಖ್ಯೆಯನ್ನು ಹೊಂದಿದೆ. ಅಲ್ಲದೆ ಗೂಗಲ್ ಪ್ಲೇ ಕನ್ಸೋಲ್ ಪಟ್ಟಿಯಲ್ಲಿ ಕೂಡ ಕಾಣಿಸಿಕೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665v SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನು ಸಹ ನಿಡಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.ಇನ್ನು ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿವೆ. ಸಂವೇದಕಗಳನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಶೂಟರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಅಲ್ಲದೆ ಈ ಸ್ಮಾರ್ಟ್‌ಫೋನ್ ದೊಡ್ಡ ಗಾತ್ರದ 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಚೀನಾದ ಮಾರುಕಟ್ಟೆಯಲ್ಲಿ ಮೇ 1 ರಂದು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗ್ತಿದೆ. ಈ ಸ್ಮಾರ್ಟ್‌ಫೋನ್ ಕಪ್ಪು, ಸ್ಟಾರ್ ವೈಟ್ ಮತ್ತು ಕಂಡೆನ್ಸೇಶನ್ ಪರ್ಪಲ್ ಬಣ್ಣಗಳಲ್ಲಿ ಲಬ್ಯವಾಗಲಿದ್ದು, ಇದರ ಬೆಲೆ CNY 1,799 (ಸರಿಸುಮಾರು ರೂ. 19,500) ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications




