ಶಾಶ್ವತ ಬೆಲೆ ಇಳಿಕೆ ಕಂಡ ಒಪ್ಪೊ A53 2020 ಸ್ಮಾರ್ಟ್‌ಫೋನ್!
ಜನಪ್ರಿಯ ಒಪ್ಪೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಭಾರತದಲ್ಲಿ ಒಪ್ಪೊ A53 2020 ಸ್ಮಾರ್ಟ್‌ಫೋನ್ ಬೆಲೆಯನ್ನು ಶಾಶ್ವತವಾಗಿ ಕಡಿತಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಎರಡೂ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿತ್ತು. ಎರಡು ರೂಪಾಂತರಗಳು ಕೂಡ ಪರಿಷ್ಕೃತ ಬೆಲೆಯನ್ನು ಪಡೆದಿವೆ. ಇವುಗಳನ್ನು ಫ್ಲಿಪ್‌ಕಾರ್ಟ್‌ನಲ್ಲಿ ಅವುಗಳ ಹೊಸ ಬೆಲೆ ಟ್ಯಾಗ್‌ಗಳೊಂದಿಗೆ ಪಟ್ಟಿ ಮಾಡಲಾಗಿದೆ.

ಹೌದು, ಒಪ್ಪೋ ಸಂಸ್ಥೆಯ ಒಪ್ಪೋ A53 2020 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 2,000 ರೂ.ಗಳ ಶಾಶ್ವತ ಬೆಲೆ ಕಡಿತ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಂಚ್ ಹೋಲ್ ಮತ್ತು ಗ್ರೇಡಿಯಂಟ್ ಬ್ಯಾಕ್ ವಿನ್ಯಾಸವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಒಪ್ಪೋ A53 2020 ಸ್ಮಾರ್ಟ್ ಫೋನ್ 1,600x720 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.5 ಇಂಚಿನ HD + ಗುಣಮಟ್ಟವನ್ನು ಹೊಂದಿದೆ. 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ A53 2020 ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 460 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ನೀಡಲಾಗಿದೆ.

ಕ್ಯಾಮೆರಾ ವಿಶೇಷ
ಒಪ್ಪೋ A53 2020 ಸ್ಮಾರ್ಟ್ ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾ 13 MP ಸೆಕೆಂಡರಿ ಕ್ಯಾಮೆರಾ 2 MP ಹಾಗೂ ತೃತೀಯ ಕ್ಯಾಮೆರಾವು ಸಹ 2MP ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಮುಂಭಾಗದಲ್ಲಿ 16MP ಕ್ಯಾಮೆರಾವನ್ನು ನೀಡಲಾಗಿದೆ. ಇದು ಹೊಸ ಆಯ್ಕೆಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಒಪ್ಪೋ A53 2020 ಸ್ಮಾರ್ಟ್ ಫೋನ್ 5000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ವೋಲ್ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಹಾಗೆಯೇ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿನ ಪಟ್ಟಿಗಳ ಪ್ರಕಾರ, ಒಪ್ಪೋ A53 2020 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM ಮತ್ತು 64GB ಶೇಖರಣಾ ಮಾದರಿಯ ಮೂಲ ಬೆಲೆ 12,990 ರೂ ಆಗಿದೆ. ಆದರೆ ಬೆಲೆ ಕಡಿತದ ನಂತರ ಇದೀಗ 10,990 ರೂ.ಬೆಲೆಗೆ ಖರೀದಿಸಬಹುದಾಗಿದೆ. ಅಂತೆಯೇ, 6GB RAM ಮತ್ತು 128GB RAM ಸ್ಟೋರೇಜ್ ಹೊಂದಿರುವ ಟಾಪ್-ಎಂಡ್ ಮಾದರಿಯ ಮೂಲಬೆಲೆ 15,490 ರೂ.ಆಗಿದ್ದು, ಇದನ್ನು 12,990 ರೂ. ಗೆ ಖರೀದಿಸಬಹುದಾಗಿದೆ. ಇದು ಎಲೆಕ್ಟ್ರಿಕ್ ಬ್ಲ್ಯಾಕ್, ಫೇರಿ ವೈಟ್ ಮತ್ತು ಫ್ಯಾನ್ಸಿ ಬ್ಲೂ ಕಲರ್ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications





