Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ A53 2020 ಸ್ಮಾರ್ಟ್‌ಫೋನ್ ಲಾಂಚ್!

ಒಪ್ಪೋ ಕಂಪನಿಯ ಬಹುನಿರೀಕ್ಷಿತ ಒಪ್ಪೋ A53 2020 ಸ್ಮಾರ್ಟ್‌ಫೋನ್ ಇದೀಗ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಬಜೆಟ್‌ ಪ್ರೈಸ್‌ಟ್ಯಾಗ್‌ ಹೊಂದಿರುವುದು ಮತ್ತೊಂದು ಆಕರ್ಷಣೆ ಅನಿಸಿದೆ.

ಒಪ್ಪೋ

ಹೌದು, ಒಪ್ಪೋ ಸಂಸ್ಥೆಯು ಹೊಸದಾಗಿ ಒಪ್ಪೋ A53 2020 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಫೋನ್ 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಆಂಡ್ರಾಯ್ಡ್ 10 ಓಎಸ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 12,990ರೂ. ಆಗಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಪೂರ್ಣ ಡಿಸ್‌ಪ್ಲೇ

ಪೂರ್ಣ ಡಿಸ್‌ಪ್ಲೇ

ಒಪ್ಪೋ A53 2020 ಸ್ಮಾರ್ಟ್ ಫೋನ್ 1,600x720 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.5 ಇಂಚಿನ HD + ಗುಣಮಟ್ಟವನ್ನು ಹೊಂದಿದೆ. 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ಒಪ್ಪೋ A53 2020 ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 460 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. 4GB RAM + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ನೀಡಲಾಗಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ಒಪ್ಪೋ A53 2020 ಸ್ಮಾರ್ಟ್ ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾ 13 MP ಸೆಕೆಂಡರಿ ಕ್ಯಾಮೆರಾ 2 MP ಹಾಗೂ ತೃತೀಯ ಕ್ಯಾಮೆರಾವು ಸಹ 2MP ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಮುಂಭಾಗದಲ್ಲಿ 16MP ಕ್ಯಾಮೆರಾವನ್ನು ನೀಡಲಾಗಿದೆ. ಇದು ಹೊಸ ಆಯ್ಕೆಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಒಪ್ಪೋ A53 2020 ಸ್ಮಾರ್ಟ್ ಫೋನ್ 5000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ವೋಲ್ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಹಾಗೆಯೇ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A53 2020 ಸ್ಮಾರ್ಟ್ ಫೋನ್ 4GB RAM + 64GB ವೇರಿಯಂಟ್ ಬೆಲೆಯು 12,990ರೂ ಆಗಿದೆ. ಮತ್ತು 6GB RAM + 128GB ವೇರಿಯಂಟ್ ದರವು 15,490ರೂ. ಆಗಿದೆ. ಈ ಫೋನ್ ಬ್ಲ್ಯಾಕ್, ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣದಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Oppo A53 2020 price in India has been set at Rs. 12,990 for the 4GB RAM + 64GB storage variant.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+