ಭಾರತದ ಮಾರುಕಟ್ಟೆಯಲ್ಲಿ ಒಪ್ಪೋ A53s 5G ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಸದ್ಯ ಇದೀಗ ಹೊಸ ಒಪ್ಪೋ A53s 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಈ ಫೋನ್ ಎರಡು ಬಣ್ಣ ಆಯ್ಕೆಗಳಲ್ಲಿ ಮತ್ತು ಎರಡು RAM ಮತ್ತು ಶೇಖರಣಾ ಸಾಮರ್ಥ್ಯದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A53s 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.52-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಒಪ್ಪೋ A53s 5G ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.7% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು ಸ್ಟ್ಯಾಂಡರ್ಡ್ 60Hz ರಿಫ್ರೆಶ್ ರೇಟ್‌ಅನ್ನು ಹೊಂದಿದೆ.

ಪ್ರೊಸೆಸರ್
ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಮಾಲಿ-ಜಿ 57 ಎಂಸಿ 2 ಜಿಪಿಯುನಿಂದ ನಿಯಂತ್ರಿಸಲ್ಪಡುತ್ತದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಒಪ್ಪೋ A53s 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 17.74 ಗಂಟೆಗಳ ನಿರಂತರ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈ-ಫೈ, ಜಿಪಿಎಸ್, ಬ್ಲೂಟೂತ್ ವಿ 5, ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A53s 5G ಸ್ಮಾರ್ಟ್‌ಫೋನ್ ಬೆಲೆ 6GB RAM + 128GB ಮಾದರಿಗೆ 14,990 ರೂ. ಮತ್ತು 8GB RAM + 128GB ಮಾದರಿಗೆ 16,990 ರೂ. ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ರಿಸ್ಟಲ್ ಬ್ಲೂ ಮತ್ತು ಇಂಕ್ ಬ್ಲ್ಯಾಕ್ ಬಣ್ಣಗಳಲ್ಲಿ ಬರುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಮೇ 2 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಸಹ 10% ತ್ವರಿತ ರಿಯಾಯಿತಿಯನ್ನು ನೀಡಲಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್, ಕ್ರೆಡಿಟ್ ಇಎಂಐ ಮತ್ತು ಡೆಬಿಟ್ ಕಾರ್ಡ್ ಇಎಂಐ ಅಲ್ಲದ ವಹಿವಾಟಿನಲ್ಲಿ 1,250 ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ.


Click it and Unblock the Notifications





