ಒಪ್ಪೋ A54 ಸ್ಮಾರ್ಟ್‌ಫೋನ್ ಅನಾವರಣ! 5,000mAh ಬ್ಯಾಟರಿ ವಿಶೇಷ!
ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಒಪ್ಪೋ ಕಂಪೆನಿ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಒಪ್ಪೋ ಇದೀಗ ಹೊಸ ಒಪ್ಪೋ A54 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಒಪ್ಪೋ ಸಂಸ್ಥೆ ತನ್ನ ಹೊಸ ಒಪ್ಪೋ A54 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.51ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಒಪ್ಪೋ A54 ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಒಪ್ಪೋ A54 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5ಎಂಎಂ ಆಡಿಯೊ ಜ್ಯಾಕ್ ಮತ್ತು ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A54 ಸ್ಮಾರ್ಟ್‌ಫೋನ್ ಸದ್ಯ ಇಂಡೋನೇಷ್ಯಾದಲ್ಲಿ ಬಿಡುಗಡೆ ಆಗಿರುವುದರಿಂದ ಇದರ ಬೆಲೆ ಐಡಿಆರ್ 2,699,000(ಸುಮಾರು 13,700 ರೂ.)ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇಂಡೋನೇಷ್ಯಾದಲ್ಲಿ ಏಪ್ರಿಲ್ 1 ರಂದು ಮಾರಾಟವಾಗಲಿದೆ. ಒಪ್ಪೋ ಈ ಫೋನ್ ಅನ್ನು ಇತರ ಮಾರುಕಟ್ಟೆಗಳಲ್ಲಿ ಯಾವಾಗ ಬಿಡುಗಡೆ ಮಾಡುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್ ಕ್ರಿಸ್ಟಲ್ ಬ್ಲ್ಯಾಕ್ ಮತ್ತು ಸ್ಟಾರಿ ಬ್ಲೂ ಎರಡು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications








