ಭಾರತದಲ್ಲಿ ಒಪ್ಪೋ A54 ಸ್ಮಾರ್ಟ್‌ಫೋನ್ ಬಿಡುಗಡೆ!..ಟ್ರಿಪಲ್ ಕ್ಯಾಮೆರಾ!
ಜನಪ್ರಿಯ ಒಪ್ಪೋ ಕಂಪೆನಿಯು ಇತ್ತೀಚಿಗಷ್ಟೆ ನೂತನವಾಗಿ ಅನಾವರಣ ಮಾಡಿರುವ ಒಪ್ಪೋ A54 ಸ್ಮಾರ್ಟ್‌ಫೋನ್ ಅನ್ನು ಇದೀಗ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಬಜೆಟ್ ಬೆಲೆ ಅನ್ನು ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ.

ಹೌದು, ಒಪ್ಪೋ ಕಂಪನಿಯು ತನ್ನ ಹೊಸ ಒಪ್ಪೋ A54 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗಾದರೇ ಒಪ್ಪೋ A54 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಒಪ್ಪೋ A54 ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯ
ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ಕ್ಯಾಮೆರಾ ವಿನ್ಯಾಸ
ಒಪ್ಪೋ A54 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5ಎಂಎಂ ಆಡಿಯೊ ಜ್ಯಾಕ್ ಮತ್ತು ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A54 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ದರವು 13,490ರೂ. ಆಗಿದೆ. ಹಾಗೆಯೇ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 14,490ರೂ. ಆಗಿದೆ. ಇನ್ನು ಈ ಫೋನ್ ನಾಳೆ (ಏ. 20) ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್ ಆರಂಭಿಸಲಿದೆ.


Click it and Unblock the Notifications