ಒಪ್ಪೋ A54s ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!
ಜನಪ್ರಿಯ ಒಪ್ಪೋ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರಾಂಡ್ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಒಪ್ಪೋ ಕಂಪೆನಿ ಇದೀಗ ತನ್ನ ಹೊಸ ಒಪ್ಪೋ A54s ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 60Hz ರಿಫ್ರೆಶ್ ರೇಟ್ ಹೊಂದಿರುವ 6.52-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A54s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ AI- ಬೆಂಬಲಿತ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G35 ಪ್ರೊಸೆಸರ್ ಹೊಂದಿದೆ ಹಾಗೆಯೇ 4GB + 128GB ಇಂಟರ್ ಸ್ಟೋರೇಜ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಒಪ್ಪೋ A54s ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರನೆಯ ಅನುಪಾತ ಹೊಂದಿದ್ದು, 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 269ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗೆ ಅನುಕೂಲಕರವಾದ ಡಿಸ್‌ಪ್ಲೇ ವಿನ್ಯಾಸ ಹೊಂದಿದೆ.

ಪ್ರೊಸೆಸರ್ ಯಾವುದು?
ಒಪ್ಪೋ A54s ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G35 ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ColorOS 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM ಮತ್ತು 128GB ಇಂಟರ್ ಸ್ಟೊರೇಜ್ ಅನ್ನು ಹೊಂದಿದೆ. ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿಶೇಷ
ಒಪ್ಪೋ A54s ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಮಾಡ್ಯೂಲ್ 50-ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್ f/2.4 ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ f/2.4 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್ ಮತ್ತು ಪನೊರಮ ಫೀಚರ್ಸ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A54s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಫೋನ್ ಸೂಪರ್ ಪವರ್-ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಮೋಡ್‌ಗಳನ್ನು ಕೂಡ ಸೇರಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5, ಹಾಟ್‌ಸ್ಪಾಟ್, GPS/A-GPS, 4G, Wi-Fi, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಹ್ಯಾಂಡ್ಸೆಟ್ ಭದ್ರತೆಗಾಗಿ ಫೇಸ್ ಅನ್ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಆನ್‌ಬೋರ್ಡ್‌ನಲ್ಲಿ ಅಕ್ಸೆಲೆರೊಮೀಟರ್, ಗ್ರಾವಿಟಿ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A54s ಸ್ಮಾರ್ಟ್‌ಫೋನ್ 4GB + 128GB ಸ್ಟೋರೇಜ್ ಮಾದರಿಗೆ EUR 229.99 (ಸುಮಾರು 20,000ರೂ.) ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ನವೆಂಬರ್ 18ರಿಂದ ಯುರೋಪ್‌ನಲ್ಲಿ ಲಭ್ಯವಾಗಲಿದೆ. ಇದು ಕ್ರಿಸ್ಟಲ್ ಬ್ಲ್ಯಾಕ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.


Click it and Unblock the Notifications








