Just In
Don't Miss
- News
ಸರಕಾರಿ ಡಿಜಿಟಲ್ ಕರೆನ್ಸಿ: ಅಳೆದು ತೂಗುತ್ತಿರುವ ಆರ್ಬಿಐ
- Sports
"ಇಂಥಾ ಆಟಗಾರರು, ಇಂಥಾ ಅಭಿಮಾನಿಗಳಿಂದಾಗಿ ಹೆಮ್ಮೆಯಾಗುತ್ತಿದೆ": ಸೋತ ಬಳಿಕ ಆರ್ಸಿಬಿ ನಾಯಕನ ಭಾವುಕ ಮಾತು!
- Finance
ಕಾರು, ಬೈಕು ಖರೀದಿಗೆ ಮುನ್ನ ಗಮನಿಸಿ, ಜೂನ್ 1ರಿಂದ ವಿಮೆ ಮೊತ್ತ ಏರಿಕೆ
- Movies
'ಪಾರು' ಸೀರಿಯಲ್ ನಟಿ ಸುಶ್ಮಿತಾ ರಾಮಕಲಾ ಸಿಕ್ಕಾಪಟ್ಟೆ ಸ್ಟೈಲಿಶ್!
- Lifestyle
ಈ 16 ಔಷಧಿಗಳನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಬಹುದು: ಸದ್ಯದಲ್ಲಿಯೇ ಬರಲಿದೆ ಈ ನಿಯಮ
- Automobiles
ಹೊಸ ಟ್ರಯಂಫ್ ಟೈಗರ್ 1200 ಅಡ್ವೆಂಚರ್ ಬೈಕ್ ವಿಶೇಷತೆಗಳು
- Education
KCET 2022 Syllabus : 2022ರ ಸಿಇಟಿ ಪರೀಕ್ಷೆಯ ಪಠ್ಯಕ್ರಮ ರಿಲೀಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರುಕಟ್ಟೆಗೆ ಒಪ್ಪೋ A56 5G ಸ್ಮಾರ್ಟ್‌ಫೋನ್ ಎಂಟ್ರಿ!..ಬೆಲೆ ಎಷ್ಟು?
ಮೊಬೈಲ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಆ ಲಿಸ್ಟ್‌ಗೆ ಇದೀಗ ಹೊಸದಾಗಿ ಒಪ್ಪೋ A56 5G ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಅಗ್ಗದ ಮಾದರಿಯ ಫೋನ್ ಆಗಿದ್ದು, ಮೀಡಿಯಾ ಟೆಕ್ Dimensity 700 ಆಕ್ಟಾ ಕೋರ್ SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಈ ಫೋನ್ ಬ್ಲೂ, ಬ್ಲ್ಯಾಕ್ ಹಾಗೂ ಪರ್ಪಲ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಹೌದು, ಒಪ್ಪೋ ಸಂಸ್ಥೆಯು ನೂತನವಾಗ ಒಪ್ಪೋ A56 5G ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 60Hz ಟಚ್ ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗಾದರೇ ಒಪ್ಪೋ A56 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A56 5G ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 60Hz ಟಚ್ ರೀಫ್ರೇಶ್ ರೇಟ್ ಹೊಂದಿದ್ದು, ಹಾಗೆಯೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಇನ್ನು ಪ್ರತಿ ಪಿಕ್ಸಲ್‌ನ ಸಾಂದ್ರತೆಯು 269ppi ಆಗಿದೆ. ಈ ಡಿಸ್‌ಪ್ಲೇ 88.7% ಸ್ಕ್ರೀನ್-ಟು-ಬಾಡಿ ಅನುಪಾತ ಹೊಂದಿದ್ದು, 480 nits ಬ್ರೈಟ್ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಪವರ್
ಒಪ್ಪೋ A56 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 700 ಆಕ್ಟಾ ಕೋರ್ SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ನೀಡಿದೆ.

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್
ಒಪ್ಪೋ A56 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಫೋಟೊ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒಪ್ಪೋ A56 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರೊಂದಿಗೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಇದು ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ (ನ್ಯಾನೋ) ಸ್ಲಾಟ್‌ಗಳು, ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.1, ವೈ-ಫೈ 5, 3.5 ಎಂಎಂ ಆಡಿಯೊ ಜ್ಯಾಕ್, ಜಿಪಿಎಸ್ ಮತ್ತು ಹೆಚ್ಚಿನವು ಸೇರಿವೆ. ಫೋನ್ 163.8x75.6x8.4mm ಅಳತೆ ಮತ್ತು 189.5 ಗ್ರಾಂ ತೂಗುತ್ತದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A56 5G ಸ್ಮಾರ್ಟ್‌ಫೋನ್ 6GB + 128GB ವೇರಿಯಂಟ್ ಬೆಲೆಯು CNY 1,599 (ಭಾರತದಲ್ಲಿ ಅಂದಾಜು 18,800ರೂ. ಎನ್ನಲಾಗಿದೆ). ಈ ಫೋನ್ ಬ್ಲೂ, ಬ್ಲ್ಯಾಕ್ ಹಾಗೂ ಪರ್ಪಲ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಭಾರತದಲ್ಲಿ ಯಾವಾಗ ಲಾಂಚ್ ಎನ್ನುವ ಬಗ್ಗೆ ಮಾಹಿತಿ ಬಹಿರಂಗ ಪಡಿಸಿಲ್ಲ.

ಒಪ್ಪೋ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ A53s 5G ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999