ಒಪ್ಪೋ ಸಂಸ್ಥೆಯಿಂದ ಹೊಸ ಬಜೆಟ್‌ ಫೋನ್‌ ಲಾಂಚ್!..ಆಕರ್ಷಕ ಫೀಚರ್ಸ್‌!

|

ಮೊಬೈಲ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಆ ಲಿಸ್ಟ್‌ಗೆ ಇದೀಗ ಹೊಸದಾಗಿ ಒಪ್ಪೋ A56s ಸ್ಮಾರ್ಟ್‌ಫೋನ್‌ ಅನ್ನು ಸೇರ್ಪಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಅಗ್ಗದ ಮಾದರಿಯ ಫೋನ್‌ ಆಗಿದ್ದು, ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಒಪ್ಪೋ ಸಂಸ್ಥೆಯಿಂದ ಹೊಸ ಬಜೆಟ್‌ ಫೋನ್‌ ಲಾಂಚ್!..ಆಕರ್ಷಕ ಫೀಚರ್ಸ್‌!

ಹೌದು, ಒಪ್ಪೋ ಸಂಸ್ಥೆಯು ನೂತನವಾಗ ಒಪ್ಪೋ A56s ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ಟಚ್ ರಿಫ್ರಶ್‌ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗಾದರೇ ಒಪ್ಪೋ A56s ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ ಸಂಸ್ಥೆಯಿಂದ ಹೊಸ ಬಜೆಟ್‌ ಫೋನ್‌ ಲಾಂಚ್!..ಆಕರ್ಷಕ ಫೀಚರ್ಸ್‌!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A56s ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ಟಚ್ ರೀಫ್ರೇಶ್ ರೇಟ್ ಹೊಂದಿದ್ದು, ಹಾಗೆಯೇ ಉತ್ತಮ ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಇನ್ನು ಪ್ರತಿ ಪಿಕ್ಸಲ್‌ನ ಸಾಂದ್ರತೆಯು 269ppi ಆಗಿದ್ದು, 600 nits ಬ್ರೈಟ್ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಪವರ್
ಒಪ್ಪೋ A56s ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ8GB + 128GB ಮತ್ತು 8GB + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ನೀಡಿದೆ.

ಒಪ್ಪೋ ಸಂಸ್ಥೆಯಿಂದ ಹೊಸ ಬಜೆಟ್‌ ಫೋನ್‌ ಲಾಂಚ್!..ಆಕರ್ಷಕ ಫೀಚರ್ಸ್‌!

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್
ಒಪ್ಪೋ A56s ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಫೋಟೊ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒಪ್ಪೋ A56s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರೊಂದಿಗೆ 10w ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಇದು ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ (ನ್ಯಾನೋ) ಸ್ಲಾಟ್‌ಗಳು, ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.1, ವೈ-ಫೈ 5, 3.5 ಎಂಎಂ ಆಡಿಯೊ ಜ್ಯಾಕ್, ಜಿಪಿಎಸ್ ಮತ್ತು ಹೆಚ್ಚಿನವು ಸೇರಿವೆ. ಫೋನ್ 163.8x75.6x8.4mm ಅಳತೆ ಮತ್ತು 189.5 ಗ್ರಾಂ ತೂಗುತ್ತದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A56 5G ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ ಬೆಲೆಯು RMB 1099 (ಭಾರತದಲ್ಲಿ ಅಂದಾಜು 13,330ರೂ.) ಎನ್ನಲಾಗಿದೆ. ಹಾಗೆಯೇ 8GB + 256GB ವೇರಿಯಂಟ್‌ ದರದವು RMB 1299 (ಭಾರತದಲ್ಲಿ ಅಂದಾಜು 15,750ರೂ). ಎನ್ನಲಾಗಿದೆ. ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಭಾರತದಲ್ಲಿ ಯಾವಾಗ ಲಾಂಚ್ ಎನ್ನುವ ಬಗ್ಗೆ ಮಾಹಿತಿ ಬಹಿರಂಗ ಪಡಿಸಿಲ್ಲ.

Best Mobiles in India

English summary
Oppo A56s with 5000mAh Battery Launched: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X