OPPO: ಒಪ್ಪೋ A57 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ! 1TB ವರೆಗೆ ಸ್ಟೋರೇಜ್ ಆಯ್ಕೆ
ಒಪ್ಪೋ ಸ್ಮಾರ್ಟ್‌ಫೋನ್‌ಗಳು (Oppo Smartphones) ವಿಶೇಷ ಪ್ರೊಸೆಸರ್ ಹಾಗೂ ಕ್ಯಾಮೆರಾ ಆಯ್ಕೆ ಪಡೆಯುವ ಮೂಲಕ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಈ ನಡುವೆ ಒಪ್ಪೋ A57 ಸ್ಮಾರ್ಟ್‌ಫೋನ್ ಅನ್ನು ಭಾರೀ ಅಗ್ಗದ ದರದಲ್ಲಿ ಖರೀದಿ ಮಾಡಬಹುದಾಗಿದೆ.
ಹೌದು, ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಒಪ್ಪೋ A57 ಸ್ಮಾರ್ಟ್‌ಫೋನ್‌ಗೆ (Oppo A57 smartphone) ಭಾರೀ ಡಿಸ್ಕೌಂಟ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದಿದ್ದು, ಮೀಡಿಯಾಟೆಕ್ ಹಿಲಿಯೋ G35 ಪ್ರೊಸೆಸರ್ ಬಲ ಪಡೆದಿದೆ. ಹಾಗಿದ್ರೆ, ಇದರ ಆಫರ್ ಬೆಲೆ ವಿವರ ಹಾಗೂ ಈ ಫೋನ್‌ನ ಪ್ರಮುಖ ಫೀಚರ್ಸ್ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಒಪ್ಪೋ A57 ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 16,990 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆ. ಆದರೆ ನೀವು ಈಗ ಇದನ್ನು 9,999 ರೂ.ಗಳಿಗೆ ಕೊಂಡುಕೊಳ್ಳಬಹುದಾಗಿದೆ. ಅಂದರೆ ಈ ಫೋನ್‌ಗೆ 41% ರಿಯಾಯಿತಿ ನೀಡಲಾಗಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಸಹ ನೀಡಲಾಗಿದ್ದು, ಇನ್ನೂ ಕಡಿಮೆ ದರದಲ್ಲಿ ಖರೀದಿ ಮಾಡಬಹುದಾಗಿದೆ.
ಈ ಸ್ಮಾರ್ಟ್ ಫೋನ್ ಅನ್ನು ಖರೀದಿ ಮಾಡುವಾಗ ಫ್ಲಿಪ್‌ಕಾರ್ಟ್ ಯುಪಿಐ ಬಳಕೆ ಮಾಡಿದ್ರೆ ತ್ವರಿತ ರಿಯಾಯಿತಿ, ಸಿಟಿ-ಬ್ರಾಂಡೆಡ್ ಕ್ರೆಡಿಟ್ ಕಾರ್ಡ್ ಇಎಂಐ ವ್ಯವಹಾರದ ಮೇಲೆ ಬ್ಯಾಂಕ್ ಆಫರ್ 10%, ಹೆಚ್‌ಎಸ್‌ಬಿಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಇಎಮ್ಐ ವ್ಯವಹಾರದ ಮೇಲೆ 10% ರಿಯಾಯಿತಿ, ಐಸಿಐಸಿಐ ಬ್ಯಾಂಕ್ ರುಪೇ ಕ್ರೆಡಿಟ್ ಕಾರ್ಡ್ ಮತ್ತು ಇಎಂಐ ಟಿಎಕ್ಸ್‌ಎನ್‌ನಲ್ಲಿ ಬ್ಯಾಂಕ್ ಆಫರ್ 10% ರಿಯಾಯಿತಿ, ಕೋಟಾಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ ಬ್ಯಾಂಕ್ ಆಫರ್ 10% ರಿಯಾಯಿತಿ ಸಿಗಲಿದೆ. ಹಾಗಿದ್ರೆ ಈ ಫೋನ್‌ನ ಫೀಚರ್ಸ್ ಕಡೆಗೂ ಕಣ್ಣಾಯಿಸೋಣ ಬನ್ನಿ.

ಒಪ್ಪೋ A57 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಇನ್ನು ಈ ಸ್ಮಾರ್ಟ್‌ಫೋನ್ 6.56 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 90Hz ರಿಫ್ರೆಶ್ ರೇಟ್ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದ್ದು , 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.
ಒಪ್ಪೋ A57 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12, ಕಲರ್ ಓಎಸ್ 12.1 ಅನ್ನು ರನ್ ಮಾಡಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 810 (6 nm) CPU ಆಕ್ಟಾ-ಕೋರ್ (2x2.4 GHz ಕಾರ್ಟೆಕ್ಸ್-A76 & 6x2.0 GHz ಕಾರ್ಟೆಕ್ಸ್-A55) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ G57 MC2 ಜಿಪಿಯು ಬಲ ಪಡೆದಿದ್ದು, 64 GB ಇಂಟರ್ ಸ್ಟೋರೇಜ್ ಮತ್ತು 4 GB RAM ಹೊಂದಿದೆ.
ಒಪ್ಪೋ A57 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಇದು ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಅದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದ್ದರೆ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಆಯ್ಕೆ ನೀಡಲಾಗಿದೆ. ಇದರ ಜೊತೆಗೆ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಕಾಣಬಹುದಾಗಿದೆ. ಅಲ್ಲದೆ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದಿದೆ.

ಒಪ್ಪೋ A57 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಹಾಗೆಯೇ ಸೌಂಡ್ ಲೌಡ್‌ಸ್ಪೀಕರ್ ಹೌದು, ಸ್ಟೀರಿಯೋ ಸ್ಪೀಕರ್, 3.5 ಎಂಎಂ ಜ್ಯಾಕ್, ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.2, A2DP, LE, aptX HD, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ.


Click it and Unblock the Notifications








