Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ A58 4G ಸ್ಮಾರ್ಟ್‌ಫೋನ್‌ ಲಾಂಚ್‌; ಬೆಲೆ ಎಷ್ಟು?

ಭಾರಿ ನಿರೀಕ್ಷೆಯೊಂದಿಗೆ ಒಪ್ಪೋ A58 4G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ನ ವಿನ್ಯಾಸ ಹಾಗೂ ಡಿಸೈನ್‌ ಲುಕ್‌ ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ.

ಹೌದು, ಒಪ್ಪೋ A58 4G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇನ್ನು ಸ್ಮಾರ್ಟ್‌ಫೋನ್‌ 33W ವೈರ್ಡ್ ಸೂಪರ್‌ವೂಕ್‌ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ  ಒಪ್ಪೋ A58 4G ಸ್ಮಾರ್ಟ್‌ಫೋನ್‌ ಲಾಂಚ್‌; ಬೆಲೆ ಎಷ್ಟು?

ಒಪ್ಪೋ A58 4G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A58 4G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ನ ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇದು 86.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಒಪ್ಪೋ A58 4G ಪ್ರೊಸೆಸರ್‌ ಯಾವುದು?
ಒಪ್ಪೋ A58 4G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಮಾಲಿ G52 MC2 GPU ಸಪೋರ್ಟ್‌ ಪಡೆದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ColorOS 13.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಒಪ್ಪೋ A58 4G ಕ್ಯಾಮೆರಾ ಸೆಟ್‌ಅಪ್‌
ಒಪ್ಪೋ A58 4G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಎಲ್ಇಡಿ ಫ್ಲ್ಯಾಷ್ ಯೂನಿಟ್‌ ಅನ್ನು ಸಹ ನೀಡಲಾಗಿದೆ.

ಒಪ್ಪೋ A58 4G ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಒಪ್ಪೋ A58 4G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಸೂಪರ್‌ವೂಕ್‌ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.3, 4G, NFC, GPS ಮತ್ತು USB ಟೈಪ್-ಸಿ ಕನೆಕ್ಟಿವಿಟಿ ಆಯ್ಕೆಯನ್ನು ನೀಡಲಿದೆ. ಇದು 3.5 ಎಂಎಂ ಆಡಿಯೊ ಜಾಕ್‌ನೊಂದಿಗೆ ಬರುತ್ತದೆ.

ಒಪ್ಪೋ A58 4G ಬೆಲೆ ಮತ್ತು ಲಭ್ಯತೆ
ಒಪ್ಪೋ A58 4G ಸ್ಮಾರ್ಟ್‌ಫೋನ್‌ 6GB + 128GB ರೂಪಾಂತರದ ಆಯ್ಕೆಗೆ 14,999ರೂ. ಬೆಲೆಯನ್ನು ಪಡೆದಿದೆ. ಇದನ್ನು ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಇನ್ನು ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮೂಲಕ ಫೋನ್ ಮಾರಾಟಕ್ಕೆ ಲಭ್ಯವಿದ್ದು, ನೋ ಕಾಸ್ಟ್‌ EMI ಆಯ್ಕೆ ಕೂಡ ಲಭ್ಯವಿದೆ. ಇದಲ್ಲದೆ ICICI, HDFC, ಮತ್ತು Kotak ಬ್ಯಾಂಕ್ ಸೇರಿದಂತೆ ಆಯ್ದ ಬ್ಯಾಂಕ್‌ಗಳ ಕಾರ್ಡ್ ಮೂಲಕ ಖರೀದಿಸಿದರೆ ವಿಶೇಷ ರಿಯಾಯಿತಿ ಕೂಡ ಲಭ್ಯವಾಗಲಿದೆ.

Best Mobiles in India

English summary
Oppo A58 4G Launched in India: Price and Specifications details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+