ಒಪ್ಪೋ A58 4G ಸ್ಮಾರ್ಟ್‌ಫೋನ್ ಲಾಂಚ್! ಫೀಚರ್ಸ್ ವಿಶೇಷತೆ ಹೇಗಿದೆ?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿ ಒಪ್ಪೋ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಅನ್ನು ಒಪ್ಪೋ A58 4G ಎಂದು ಹೆಸರಿಸಲಾಗಿದೆ. ಇದು ಮೀಡಿಯಾಟೆಕ್ ಹಿಲಿಯೋ G85 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ.
ಹೌದು, ಒಪ್ಪೋ A58 4G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A58 4G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A58 4G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2,400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಹಾಗೂ 680 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ ಸುಗಮ ಮತ್ತು ತಲ್ಲೀನಗೊಳಿಸುವ ಅನುಭವವನ್ನು ಖಾತರಿಪಡಿಸುತ್ತದೆ.
ಒಪ್ಪೋ A58 4G ಪ್ರೊಸೆಸರ್ ಯಾವುದು?
ಒಪ್ಪೋ A58 4G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ನಿಮ್ಮ ಮೊಬೈಲ್‌ನಲ್ಲಿ ಫೈಲ್‌ಗಳು ಮತ್ತು ಅಪ್ಲಿಕೇಶನ್‌ಗಳಿಗೆ ನೀವು ಸಾಕಷ್ಟು ಸ್ಥಳಾವಕಾಶವನ್ನು ಹೊಂದಿದೆ.
ಒಪ್ಪೋ A58 4G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A58 4G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 2MP ಕಂಪ್ಯಾನಿಯನ್ ಕ್ಯಾಮರಾ ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನು ಮುಖ್ಯ ಕ್ಯಾಮೆರಾ 1080p ವೀಡಿಯೊ ರೆಕಾರ್ಡಿಂಗ್ ಅನ್ನು 30fps ನಲ್ಲಿ ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಒಪ್ಪೋ A58 4G ಬ್ಯಾಟರಿ ಬ್ಯಾಕ್‌ಅಪ್ ಏನಿರಲಿದೆ?
ಒಪ್ಪೋ A58 4G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ತ್ವರಿತ ಮತ್ತು ಅನುಕೂಲಕರ ಪವರ್-ಅಪ್‌ಗಳಿಗಾಗಿ 33W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಅನ್‌ಲಾಕಿಂಗ್ ಬೇಡವೆಂದು ಬಯಸಿದರೆ ಫೇಸ್-ಅನ್‌ಲಾಕ್ ಫೀಚರ್ಸ್ ಅನ್ನು ಕೂಡ ಬಳಸಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫಐ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ಒಪ್ಪೋ A58 4G ಸ್ಮಾರ್ಟ್‌ಫೋನ್ ಪ್ರಸ್ತುತ ಇಂಡೋನೇಷ್ಯಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಇದರ ಬೆಲೆ IDR 2,499,000 (ಅಂದಾಜು 13,620ರೂ)ಬೆಲೆಯಲ್ಲಿ ಬರಲಿದೆ. ಇದನ್ನು ನೀವು ಬೆರಗುಗೊಳಿಸುವ ಹಸಿರು ಮತ್ತು ಹೊಳೆಯುವ ಕಪ್ಪು ಬಣ್ಣದ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.
ಇದಲ್ಲದೆ ಒಪ್ಪೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಒಪ್ಪೋ ರೆನೋ 8T 5G ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನಿನ ಡಿಸ್‌ಪ್ಲೇ ಡ್ರ್ಯಾಗನ್ ಟ್ರೈಲ್ ಸ್ಟಾರ್ 2 ಪ್ರೊಟೆಕ್ಷನ್ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡೈನಾಮಿಕ್ ಕಂಪ್ಯೂಟಿಂಗ್ ಇಂಜಿನ್ ಫೀಚರ್ಸ್ ಅನ್ನು ಸಹ ಒಳಗೊಂಡಿದೆ.


Click it and Unblock the Notifications








