ಒಪ್ಪೋ A58 5G ಸ್ಮಾರ್ಟ್‌ಫೋನ್ ಲಾಂಚ್! 33W ವೇಗದ ಚಾರ್ಜಿಂಗ್ ವಿಶೇಷ!
ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಎನಿಸಿಕೊಂಡಿದೆ. ಸದ್ಯ ಇದೀಗ ಮಾರುಕಟ್ಟೆಯಲ್ಲಿ ಹೊಸ ಒಪ್ಪೋ A58 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 5G ಸ್ಮಾರ್ಟ್‌ಫೋನ್ ಆಗಿದ್ದು ಡ್ಯುಯಲ್-ಮೋಡ್ 5G ಗೆ ಬೆಂಬಲವನ್ನು ನೀಡಲಿದೆ.

ಹೌದು, ಒಪ್ಪೋ ಕಂಪೆನಿ ಟೆಕ್ ಮಾರುಕಟ್ಟೆಯಲ್ಲಿ ಹೊಸ ಒಪ್ಪೋ A58 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 33W ಸೂಪರ್‌ವೋಕ್ ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?
ಒಪ್ಪೋ A58 5G ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720x1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.

ಪ್ರೊಸೆಸರ್ ಯಾವುದು?
ಒಪ್ಪೋ A58 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಕಲರ್‌ಒಎಸ್ 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದರಲ್ಲಿ ಆನ್‌ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5GB ವರೆಗೆ RAM ವಿಸ್ತರಿಸಬಹುದು.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A58 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಒಪ್ಪೋ A58 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್ ವೂಕ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ 8.5 ಗಂಟೆಗಳ ಗೇಮಿಂಗ್ ಸಮಯವನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A58 5G ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾ ಮಾರುಕಟ್ಟೆಯಲ್ಲಿ ಪ್ರೀ ಬುಕ್ಕಿಂಗ್‌ಗೆ ಸಿದ್ಧವಿದೆ. ಇದರ ಬೆಲೆ CNY 1.699 (ಸುಮಾರು 19,000ರೂ)ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ರೀಜ್ ಪರ್ಪಲ್, ಸ್ಟಾರ್ ಬ್ಲ್ಯಾಕ್ ಮತ್ತು ಟ್ರ್ಯಾಂಕ್ವಿಲ್ ಸೀ ಬ್ಲೂ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ. ಈ ಫೋನ್ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗಳಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications








