Home
ಸುದ್ದಿಜಾಲ

ಈ ಜನಪ್ರಿಯ ಮೊಬೈಲ್‌ಗೆ ಬಿಗ್ ಡಿಸ್ಕೌಂಟ್‌; ಸಸ್ತಾ ಬೆಲೆಗೆ ಖರೀದಿಸಬಹುದು!

ಒಪ್ಪೋ ಮೊಬೈಲ್‌ ಕಂಪನಿಯು ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಒಂದಾದ ಒಪ್ಪೋ A58 4G ಮೊಬೈಲ್‌ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಆಗಿದೆ. ಆಕರ್ಷಕ ಫೀಚರ್ಸ್‌ಗಳೊಂದಿಗೆ ಕಾಣಿಸಿಕೊಂಡಿರುವ ಈ ಫೋನ್ ಇದೀಗ ಸಖತ್ ಬೆಲೆ ಇಳಿಕೆಯಿಂದಾಗಿ ಅಗ್ಗದ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯ.

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್‌ ತಾಣದಲ್ಲಿ ಒಪ್ಪೋ A58 ಮೊಬೈಲ್‌ ಬೆಲೆಯಲ್ಲಿ ಶೇ. 21% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ನ 6GB RAM + 128GB ವೇರಿಯಂಟ್‌ 18,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಆದರೆ ಸದ್ಯ ಆಫರ್‌ನಲ್ಲಿ ಈ ಫೋನ್‌ ಸದ್ಯ 14,999ರೂ. ಗಳಿಗೆ ಖರೀದಿಗೆ ಲಭ್ಯವಾಗಲಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಲಭ್ಯ ಆಗಲಿದೆ.

ಈ ಜನಪ್ರಿಯ ಮೊಬೈಲ್‌ಗೆ ಬಿಗ್ ಡಿಸ್ಕೌಂಟ್‌; ಸಸ್ತಾ ಬೆಲೆಗೆ ಖರೀದಿಸಬಹುದು!

ಇನ್ನು ಒಪ್ಪೋ A58 ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಅಲ್ಲದೇ ಈ ಫೋನ್‌ ಡಾಜಿಂಗ್ ಗ್ರೀನ್ ಹಾಗೂ ಗ್ಲೋವಿಂಗ್ ಬ್ಲ್ಯಾಕ್‌ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಒಪ್ಪೋ A58 ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A58 4G ಡಿಸ್‌ಪ್ಲೇ ರಚನೆ ಹೇಗಿದೆ :
ಒಪ್ಪೋ A58 4G ಮೊಬೈಲ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 2,400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹಾಗೂ 680 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಇದು ಒಳಗೊಂಡಿದೆ.

ಒಪ್ಪೋ A58 4G ಪ್ರೊಸೆಸರ್‌ ಕಾರ್ಯವೈಖರಿ :
ಒಪ್ಪೋ A58 4G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಫೋರ್ಟ್‌ ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ನಿಮ್ಮ ಮೊಬೈಲ್‌ನಲ್ಲಿ ಫೈಲ್‌ಗಳು ಮತ್ತು ಆಪ್ಸ್‌ಗಳಿಗೆ ಅಗತ್ಯ ಸ್ಥಳಾವಕಾಶವನ್ನು ಹೊಂದಿದೆ.

ಒಪ್ಪೋ A58 4G ಕ್ಯಾಮೆರಾ ರಚನೆ ಹೇಗಿದೆ :
ಒಪ್ಪೋ A58 4G ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಕ್ಯಾಮರಾ ಒಳಗೊಂಡಿದೆ. ಇನ್ನು ಮುಖ್ಯ ಕ್ಯಾಮೆರಾ 1080p ವೀಡಿಯೊ ರೆಕಾರ್ಡಿಂಗ್ ಅನ್ನು 30fps ನಲ್ಲಿ ಸಪೋರ್ಟ್‌ ಮಾಡುತ್ತದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಇದೆ.

ಒಪ್ಪೋ A58 4G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ :
ಒಪ್ಪೋ A58 4G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 33W ಚಾರ್ಜಿಂಗ್ ಅನ್ನು ಸಪೋರ್ಟ್‌ ಕೂಡಾ ಪಡೆದಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಅನ್‌ಲಾಕಿಂಗ್, ಫೇಸ್-ಅನ್‌ಲಾಕ್ ಫೀಚರ್ಸ್‌ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫಐ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ.

Best Mobiles in India

English summary
OPPO A58 big price slashed on amazon. check offer price and specifications details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+