Home
ಸುದ್ದಿಜಾಲ

128GB ಸಾಮರ್ಥ್ಯದ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ!

ಒಪ್ಪೋ ಕಂಪೆನಿಯ ಒಪ್ಪೋ A58 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಗ್ರಾಹಕರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿರುವ ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೂಲಕ ಹೊಸ ವರ್ಷಕ್ಕೂ ಮುನ್ನ ನ್ಯೂ ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ಗುಡ್‌ ನ್ಯೂಸ್‌ ನೀಡಿದೆ.

ಹೌದು, ಒಪ್ಪೋ A58 ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಬಜೆಟ್‌ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದು ಕೊಂಡರೆ ನಿಮಗೆ ಸೂಕ್ತ ಆಯ್ಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಒಪ್ಪೋ A58 ಸ್ಮಾರ್ಟ್‌ಫೋನ್‌ ಪಡೆದುಕೊಂಡಿರುವ ಡಿಸ್ಕೌಂಟ್‌ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

128GB ಸಾಮರ್ಥ್ಯದ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ!

ಒಪ್ಪೋ A58 ಡಿಸ್ಕೌಂಟ್‌ ಎಷ್ಟು?
ಒಪ್ಪೋ A58 (oppo) ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಬರೋಬ್ಬರಿ 38% ಡಿಸ್ಕೌಂಟ್‌ ಪಡೆದಿದೆ. ಆದರಿಂದ 20,999ರೂ ಬೆಲೆಗೆ ಪಟ್ಟಿ ಮಾಡಲಾಗಿರುವ ಫೋನ್‌ ನಿಮಗೆ ಕೇವಲ 12,999ರೂ ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಒಪ್ಪೋ A58 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A58 ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದುಕೊಂಡಿದೆ. ಈ ಡಿಸ್‌ಪ್ಲೇ 90Hz ನ ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇದು 86.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

128GB ಸಾಮರ್ಥ್ಯದ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ!

ಒಪ್ಪೋ A58 4G ಪ್ರೊಸೆಸರ್‌ ಯಾವುದು?
ಒಪ್ಪೋ A58 4G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಹೊಂದಿದ್ದು, ಮಾಲಿ G52 MC2 GPU ಸಪೋರ್ಟ್‌ ಪಡೆದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ColorOS 13.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಒಪ್ಪೋ A58 4G ಕ್ಯಾಮೆರಾ ಸೆಟ್‌ಅಪ್‌
ಒಪ್ಪೋ A58 4G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಎಲ್ಇಡಿ ಫ್ಲ್ಯಾಷ್ ಯೂನಿಟ್‌ ಅನ್ನು ಸಹ ನೀಡಲಾಗಿದೆ.

128GB ಸಾಮರ್ಥ್ಯದ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ!

ಒಪ್ಪೋ A58 4G ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಒಪ್ಪೋ A58 4G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಸೂಪರ್‌ವೂಕ್‌ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.3, 4G, NFC, GPS ಮತ್ತು USB ಟೈಪ್-ಸಿ ಕನೆಕ್ಟಿವಿಟಿ ಆಯ್ಕೆಯನ್ನು ನೀಡಲಿದೆ. ಇದು 3.5 ಎಂಎಂ ಆಡಿಯೊ ಜಾಕ್‌ನೊಂದಿಗೆ ಬರುತ್ತದೆ.

ಒಪ್ಪೋ A58 4G ಕಲರ್‌ ಮತ್ತು ಲಭ್ಯತೆ
ಒಪ್ಪೋ A58 4G ಸ್ಮಾರ್ಟ್‌ಫೋನ್‌ 6GB + 128GB ರೂಪಾಂತರದ ಆಯ್ಕೆಯು ಇದೀಗ ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗುತ್ತಿದೆ. ಇದನ್ನು ನೀವು ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ.

Best Mobiles in India

English summary
Oppo A58 Received Huge Price Drop in Amazon Website
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+