ಬಜೆಟ್‌ ಬೆಲೆಯಲ್ಲಿ ಒಪ್ಪೋದಿಂದ ಹೊಸ ಸ್ಮಾರ್ಟ್‌ಫೋನ್‌ ಲಾಂಚ್; ಯಾವ ಕಲರ್‌ನಲ್ಲಿ ಲಭ್ಯ?

|

ಒಪ್ಪೋ ಕಂಪೆನಿ ತನ್ನ ಭಿನ್ನ ದರದಲ್ಲಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿ ಗ್ರಾಹಕ ಬಳಗವನ್ನು ಹೊಂದಿದೆ. ಆ ಪೈಕಿ ಸಂಸ್ಥೆಯ A ಸರಣಿಯ ಫೋನ್‌ಗಳು ಹೆಚ್ಚು ಗಮನ ಸೆಳೆದಿದ್ದು, ಅದೇ ಸರಣಿಯಲ್ಲಿ ಕಂಪನಿಯು ಇದೀಗ ಹೊಸದಾಗಿ ಒಪ್ಪೋ A58x (Oppo A58x) ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಒಪ್ಪೋ ಕಂಪೆನಿ ಮೊಬೈಲ್‌ ಮಾರುಕಟ್ಟೆಯಲ್ಲಿ ನೂತನವಾಗಿ ಒಪ್ಪೋ A58x (Oppo A58x) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಅನ್ನು ಪಡೆದಿದೆ. ಇನ್ನುಳಿದಂತೆ ಒಪ್ಪೋ A58x ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುವುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A58x ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720x1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ.

ಯಾವ ಪ್ರೊಸೆಸರ್‌ ಇದೆ?

ಯಾವ ಪ್ರೊಸೆಸರ್‌ ಇದೆ?

ಒಪ್ಪೋ A58x ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್‌ 12 ಆಧಾರಿತ ಕಲರ್‌ಒಎಸ್‌ 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB + 128GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ.

ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌

ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌

ಒಪ್ಪೋ A58x ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಕೆಲವು ಬೇಸಿಕ್‌ ಎಡಿಟಿಂಗ್‌ ಆಯ್ಕೆಗಳನ್ನು ಇದು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಏನು?

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಏನು?

ಒಪ್ಪೋ A58x ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಗಿಜ್‌ಮೋ ಚೀನಾ ವರದಿ ಪ್ರಕಾರ 10W ಫಾಸ್ಟ್‌ ಚಾರ್ಜಿಂಗ್‌ ಬೆಂಬಲಿಸಲಿದೆ ಎನ್ನಲಾಗಿದೆ. ಈ ಫೋನ್ 186 ಗ್ರಾಂ ತೂಕವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A58x ಸ್ಮಾರ್ಟ್‌ಫೋನ್‌ 6GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು ಚೀನಾದಲ್ಲಿ RMB 1200 (ಭಾರತದಲ್ಲಿ ಅಂದಾಜು 14,300ರೂ. ಎಂದು ಊಹಿಸಲಾಗಿದೆ). ಇನ್ನು ಈ ಸ್ಮಾರ್ಟ್‌ಫೋನ್ ಸ್ಟಾರ್ರಿ ಸ್ಕೈ ಬ್ಲ್ಯಾಕ್, ಬ್ರೀಜ್ ಪರ್ಪಲ್ ಮತ್ತು ಟ್ರ್ಯಾಂಕ್ವಿಲಿಟಿ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಫೋನ್ ಭಾರತೀಯ ಮಾರುಕಟ್ಟೆಗೆ ಯಾವಾಗ ಎಂಟ್ರಿ ಕೊಡುತ್ತೆ ಎನ್ನುವ ಬಗ್ಗೆ ಸಂಸ್ಥೆಯು ಸ್ಪಷ್ಟ ಮಾಹಿತಿ ಹೊರಹಾಕಿಲ್ಲ.

Best Mobiles in India

English summary
Oppo A58x is a toned-down version of the Oppo A58 and offers a 13MP camera setup. To those unaware, the Oppo A58 comes equipped with a 50MP primary camera.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X