Home
ಸುದ್ದಿಜಾಲ

ಒಪ್ಪೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಫೋನಿಗೆ ಭಾರೀ ಆಫರ್‌!

ದೇಶಿಯ ಮೊಬೈಲ್‌ ಮಾರುಕಟ್ಟೆಯಲ್ಲಿ ಒಪ್ಪೊ ಸಂಸ್ಥೆಯ ಫೋನ್‌ಗಳಿಗೆ ಡಿಮ್ಯಾಂಡ್‌ ಇದ್ದೆ ಇದೆ. ಆ ಪೈಕಿ ಸಂಸ್ಥೆಯ ಒಪ್ಪೋ A59 5G ಸ್ಮಾರ್ಟ್‌ಫೋನ್‌ ಸಹ ಬಜೆಟ್‌ ಬೆಲೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಒಪ್ಪೋ A59 5G ಸ್ಮಾರ್ಟ್‌ಫೋನ್‌ ಶೇ. 22% ರಷ್ಟು ಡಿಸ್ಕೌಂಟ್‌ ಹೊಂದಿದೆ. ಈ ಫೋನಿನ 6 GB RAM + 128 GB ವೇರಿಯಂಟ್‌ ಅನ್ನು ಗ್ರಾಹಕರು 15,499ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ಡಿಸ್ಕೌಂಟ್‌ ಸಹ ಲಭ್ಯ.

ಒಪ್ಪೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಫೋನಿಗೆ ಭಾರೀ ಆಫರ್‌!

ಇನ್ನು ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಹಾಗೆಯೇ ಮೀಡಿಯಾಟೆಕ್‌ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಪಡೆದಿದೆ. ಇದರೊಂದಿಗೆ ಮೊಬೈಲ್‌ನ ಮೊದಲ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನುಳಿದಂತೆ ಒಪ್ಪೋ A59 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A59 5G - ಫೀಚರ್ಸ್‌ ಹೀಗಿವೆ

ಒಪ್ಪೋ A59 5G ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ ಡ್ಯೂಡ್ರಾಪ್ ನಾಚ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲ ಹಾಗೂ 720 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ. ಇನ್ನು ಈ ಡಿಸ್‌ಪ್ಲೇ 96% NTSC ಹೈ ಕಲರ್ ಗ್ಯಾಮಟ್‌ನೊಂದಿಗೆ ಪಡೆದಿದೆ.

ಒಪ್ಪೋ A59 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 6020SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದು ColorOS 13.1 ಆಂಡ್ರಾಯ್ಡ್‌ 13 ಸಪೋರ್ಟ್‌ ಜೊತೆಗೆ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ-G57 MC2 GPU ಸಪೋರ್ಟ್‌ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಒಪ್ಪೋ A59 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಬೊಕೆ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಒಪ್ಪೋ A59 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 33W SUPERVOOC ಫ್ಲ್ಯಾಷ್ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 30 ನಿಮಿಷಗಳಲ್ಲಿ 52% ಚಾರ್ಜ್ ಮಾಡಬಹುದು ಎಂದು ಕಂಪೆನಿ ಹೇಳಿದೆ. ಇದಲ್ಲದೆ ಫೋನ್ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್‌ ಸೌಲಭ್ಯ ಪಡೆದಿದೆ.

ಒಪ್ಪೋ A59 5G ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಸ್ಟೋರೇಜ್ ಹಾಗೂ 6GB ಮತ್ತು 128GB RAM ಸ್ಟೋರೇಜ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್‌ ಅನ್ನು ಗ್ರಾಹಕರು ಸಿಲ್ಕ್ ಗೋಲ್ಡ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
OPPO A59 5G available at big discount price tag in india. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+