ಒಪ್ಪೋ A74 ಸ್ಮಾರ್ಟ್‌ಫೋನ್ ಅನಾವರಣ!..ಟ್ರಿಪಲ್‌ ಕ್ಯಾಮೆರಾ ಸ್ಪೆಷಲ್!

|

ಒಪ್ಪೋ ಮೊಬೈಲ್‌ ಸಂಸ್ಥೆಯು ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಆ ಸಾಲಿಗಿಗ ಒಪ್ಪೋ ಹೊಸದಾಗಿ ಒಪ್ಪೊ A74 ಮತ್ತು ಒಪ್ಪೋ A74 5G ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್‌ ಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿವೆ.

ಸ್ನ್ಯಾಪ್‌ಡ್ರಾಗನ್

ಹೌದು, ಒಪ್ಪೋ ಸಂಸ್ಥೆಯು ನೂತನವಾಗಿ ಒಪ್ಪೋ A74 ಮತ್ತು ಒಪ್ಪೊ A74 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಪ್ಪೋ A74 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದರೇ, ಒಪ್ಪೊ A74 5G ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗಾದರೇ ಒಪ್ಪೋ A74 ಮತ್ತು ಒಪ್ಪೊ A74 5G ಸ್ಮಾರ್ಟ್‌ಫೋನ್‌ಗಳ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A74- ಡಿಸ್‌ಪ್ಲೇ ರಚನೆ

ಒಪ್ಪೋ A74- ಡಿಸ್‌ಪ್ಲೇ ರಚನೆ

ಒಪ್ಪೋ A74 ಸ್ಮಾರ್ಟ್ ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 60Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ.

ಒಪ್ಪೋ A74- ಪ್ರೊಸೆಸರ್ ಕಾರ್ಯ

ಒಪ್ಪೋ A74- ಪ್ರೊಸೆಸರ್ ಕಾರ್ಯ

ಒಪ್ಪೋ A74 ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಇತ್ತೀಚಿಗಿನ ಆಂಡ್ರಾಯ್ಡ್‌ ಓಎಸ್‌ ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ 6GB RAM ಮತ್ತು 128GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಅನ್ನು ಒಳಗೊಂಡಿದೆ. ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಣೆಗೂ ಅವಕಾಶ ನೀಡಲಾಗಿದೆ.

ಒಪ್ಪೋ A74- ಟ್ರಿಪಲ್ ಕ್ಯಾಮೆರಾ

ಒಪ್ಪೋ A74- ಟ್ರಿಪಲ್ ಕ್ಯಾಮೆರಾ

ಒಪ್ಪೋ A74 ಸ್ಮಾರ್ಟ್ ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸಲ್ ಹಾಗೂ ತೃತೀಯ ಕ್ಯಾಮೆರಾವು ಸಹ ಮೆಗಾ 2 ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಕ್ಯಾಮೆರಾವನ್ನು ನೀಡಲಾಗಿದೆ.

ಒಪ್ಪೋ A74- ಬ್ಯಾಟರಿ ಮತ್ತು ಇತರೆ

ಒಪ್ಪೋ A74- ಬ್ಯಾಟರಿ ಮತ್ತು ಇತರೆ

ಒಪ್ಪೋ A74 ಸ್ಮಾರ್ಟ್ ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಹಾಗೆಯೇ ಆಂಬಿಯೆಂಟ್ ಲೈಟ್ ಸೆನ್ಸಾರ್, ಸಾಮೀಪ್ಯ ಸಂವೇದಕ, ಅಕ್ಸೆಲೆರೊಮೀಟರ್, ಗ್ರಾವಿಟಿ ಸೆನ್ಸರ್ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿವೆ.

ಒಪ್ಪೋ A74 5G - ಫೀಚರ್ಸ್‌

ಒಪ್ಪೋ A74 5G - ಫೀಚರ್ಸ್‌

ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

Best Mobiles in India

English summary
Oppo A74 4G sports a 6.43-inch AMOLED display with 60Hz refresh rate while the 5G variant comes with a 6.5-inch display with 90Hz refresh rate.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X