ಒಪ್ಪೋ A76 ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕರಲ್ಲಿ ಒಪ್ಪೋ ಕಂಪೆನಿ ಕೂಡ ಒಂದೆನಿಸಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಒಪ್ಪೋ A76 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ A76 ಸ್ಮಾರ್ಟ್‌ಫೋನ್ ಅನ್ನು ಮಲೆಷ್ಯಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.56 ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A76 ಸ್ಮಾರ್ಟ್‌ಫೋನ್ 720x1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹಾಗೂ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇದಲ್ಲದೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಹೇಗಿದೆ?
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್‌ಒಎಸ್ 11.1 ಔಟ್-ಆಫ್-ದಿ-ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಹೆಚ್ಚುವರಿಯಾಗಿ 5GB ತನಕ RAM ಅನ್ನು ವಿಸ್ತರಿಸುವ ಅವಕಾಶವನ್ನು ಸಹ ಪಡೆದಿದೆ.

ಕ್ಯಾಮೆರಾ ವಿಶೇಷ
ಒಪ್ಪೋ A76 ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A76 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, 802.11a/b/g/n/ac ಜೊತೆಗೆ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್-C, USB OTG, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, ಫೆಸ್ ಡಿಟೆಕ್ಷನ್, ಜಿಯೋ ಮ್ಯಾಗ್ನೆಟಿಕ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಸೆನ್ಸಾರ್, ವರ್ಚುವಲ್ ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A76 ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ MYR 899 (ಅಂದಾಜು 16,000ರೂ) ಬೆಲೆ ಹೊಂದಿದೆ. ಇದು ಮಲೇಷ್ಯಾದಲ್ಲಿರುವ ಒಪ್ಪೋ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಸಲು ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಯಾವಾಗ ಲಭ್ಯವಾಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.


Click it and Unblock the Notifications








