ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ A77 4G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿದೆ?

|

ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಒಪ್ಪೋ A77 4G ಸ್ಮಾರ್ಟ್‌ಫೋನ್‌ ಇದೀಗ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಪ್ರತಿಭಾರಿಯು ಹೊಸ ರೀತಿಯಲ್ಲಿ ಎಂಟ್ರಿ ನೀಡುವ ಒಪ್ಪೋ ಸ್ಮಾರ್ಟ್‌ಫೋನ್‌ಗಳಂತೆ ಈ ಸ್ಮಾರ್ಟ್‌ಫೋನ್‌ ಕೂಡ ವಿಶೇಷ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಅಲ್ಟ್ರಾ-ಲೀನಿಯರ್ ಸ್ಟಿರಿಯೊ ಸ್ಪೀಕರ್ ಅನ್ನು ಒಳಗೊಂಡಿದೆ. ಜೊತೆಗೆ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌ ಅನ್ನು ಪಡೆದುಕೊಂಡಿದೆ.

ಒಪ್ಪೋ A77 4G

ಹೌದು, ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ A77 4G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು ವಾಟರ್‌ಡ್ರಾಪ್ ನಾಚ್‌ ಅನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಇನ್ನು ಒಪ್ಪೋ A77 4G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W SuperVOOC ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಸ್ಕೈ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಇದು 15,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್‌ಗಳಿಂದ ಖರೀದಿಸಲು ಲಭ್ಯವಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಒಪ್ಪೋ A77 4G ಸ್ಮಾರ್ಟ್‌ಫೋನ್‌ 6.56 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 20:9 ರಚನೆಯ ಅನುಪಾತ ಮತ್ತು 84.0% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 60Hz ರಿಫ್ರೆಶ್ ರೇಟ್ ಮತ್ತು ವಾಟರ್‌ಡ್ರಾಪ್ ನಾಚ್ ಹೊಂದಿದೆ. 480 ನಿಟ್ಸ್‌ ಬ್ರೈಟ್‌ ಅನ್ನು ಕೂಡ ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒಪ್ಪೋ A77 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G57 MC2 ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯವಾಗಲಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಒಪ್ಪೋ A77 4G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು LED ಫ್ಲ್ಯಾಶ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ಫೀಚರ್ಸ್‌ ಕೂಡ ಸೇರಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A77 4G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W SuperVOOC ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್ 5.3, USB ಟೈಪ್-C 2.0, USB ಆನ್-ದಿ-ಗೋ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್‌, ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಅಲ್ಟ್ರಾ-ಲೀನಿಯರ್ ಸ್ಟಿರಿಯೊ ಸ್ಪೀಕರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A77 4G ಸ್ಮಾರ್ಟ್‌ಫೋನ್ ಭಾರತದಲ್ಲಿ 15,499ರೂ.ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಒಪ್ಪೋ ಕಂಪೆನಿಯ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್‌ಗಳಿಂದ ಖರೀದಿಸಲು ಲಭ್ಯವಿದೆ. ಇದು ಸ್ಕೈ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ರೂಪಾಂತರದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಒಪ್ಪೋ

ಇದಲ್ಲದೆ ಒಪ್ಪೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್‌ 12 ಆಧಾರಿತ ಕಲರ್‌ಒಎಸ್‌ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಒಪ್ಪೋ

ಇನ್ನು ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಈ ಫೋನ್‌ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫೋನ್ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Oppo A77 4G sports a 6.56-inch LCD HD+ display panel with a 60Hz refresh rate and a waterdrop notch.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X