ಹೊಸದಾಗಿ ಒಪ್ಪೋ ಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ತಡ ಮಾಡಬೇಡಿ!

|

ಈ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನೀವೇನಾದರೂ ಒಪ್ಪೋ ಕಂಪನಿಯ ಸ್ಮಾರ್ಟ್‌ಫೋನ್‌ ಖರೀದಿಸುವ ಪ್ಲ್ಯಾನ್ ಮಾಡಿದ್ರೆ, ಅದಕ್ಕೆ ಇದುವೇ ಸಕಾಲ. ಅರೇ ಇದೇನಿದು ಅಂತೀರಾ.? ಹೌದು, ಒಪ್ಪೋ ಸಂಸ್ಥೆಯು ತನ್ನ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭರ್ಜರಿ ದರ ಇಳಿಕೆ ಮಾಡಿದ್ದು, ಗ್ರಾಹಕರ ಗಮನ ಸೆಳೆದಿದೆ.

ಒಪ್ಪೋ F21 ಪ್ರೊ 5G

ಒಪ್ಪೋ ಸಂಸ್ಥೆಯು ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್ 1,000ರೂ. ಇಳಿಕೆ ಮಾಡಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತೆ ಮಾಡಿದೆ. ಇದರೊಂದಿಗೆ ಒಪ್ಪೋ ಕಂಪನಿಯು ತನ್ನ ಒಪ್ಪೋ A55 (OPPO A55) ಮತ್ತು ಒಪ್ಪೋ A77 (OPPO A77) ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭಾರೀ ಕಡಿತ ಮಾಡಿದ್ದು, ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.

4GB+64GB

ಬೆಲೆ ಇಳಿಕೆ ಬಳಿಕ ಒಪ್ಪೋ A55 ಫೋನ್‌ 4GB+64GB ವೇರಿಯಂಟ್‌ ಫೋನ್‌ 14,499ರೂ. ಗಳಿಗೆ ಲಭ್ಯವಿದೆ. ಹಾಗೆಯೇ 6GB+128GB ಸ್ಟೋರೇಜ್‌ ವೇರಿಯಂಟ್‌ 14,999ರೂ. ಗಳಿಗೆ ಲಭ್ಯವಿದೆ. ಅದೇ ರೀತಿ ಒಪ್ಪೋ A77 ಫೋನ್‌ ಬೆಲೆಯಲ್ಲಿ 500ರೂ. ಕಡಿತವಾಗಿದ್ದು, 4GB RAM + 128GB ವೇರಿಯಂಟ್‌ 15,999ರೂ. ಗಳಿಗೆ ದೊರೆಯುತ್ತದೆ. ಹಾಗಾದರೇ ಒಪ್ಪೋ A55 ಮತ್ತು ಒಪ್ಪೋ A77 ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A77 - ಡಿಸ್‌ಪ್ಲೇ

ಒಪ್ಪೋ A77 - ಡಿಸ್‌ಪ್ಲೇ

ಒಪ್ಪೋ A77 4G ಸ್ಮಾರ್ಟ್‌ಫೋನ್‌ 6.56 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 20:9 ರಚನೆಯ ಅನುಪಾತ ಮತ್ತು 84.0% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 60Hz ರಿಫ್ರೆಶ್ ರೇಟ್ ಮತ್ತು ವಾಟರ್‌ಡ್ರಾಪ್ ನಾಚ್ ಹೊಂದಿದೆ. 480 ನಿಟ್ಸ್‌ ಬ್ರೈಟ್‌ ಅನ್ನು ಕೂಡ ಪಡೆದುಕೊಂಡಿದೆ.

ಒಪ್ಪೋ A77 - ಪ್ರೊಸೆಸರ್

ಒಪ್ಪೋ A77 - ಪ್ರೊಸೆಸರ್

ಒಪ್ಪೋ A77 4G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G57 MC2 ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯವಾಗಲಿದೆ.

ಒಪ್ಪೋ A77 - ಕ್ಯಾಮೆರಾ

ಒಪ್ಪೋ A77 - ಕ್ಯಾಮೆರಾ

ಒಪ್ಪೋ A77 4G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು LED ಫ್ಲ್ಯಾಶ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ಫೀಚರ್ಸ್‌ ಕೂಡ ಸೇರಿದೆ.

ಒಪ್ಪೋ A77 - ಬ್ಯಾಟರಿ

ಒಪ್ಪೋ A77 - ಬ್ಯಾಟರಿ

ಒಪ್ಪೋ A77 4G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W SuperVOOC ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್ 5.3, USB ಟೈಪ್-C 2.0, USB ಆನ್-ದಿ-ಗೋ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್‌, ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಹೊಂದಿದೆ.

ಒಪ್ಪೋ A55 ಫೀಚರ್ಸ್‌

ಒಪ್ಪೋ A55 ಫೀಚರ್ಸ್‌

A55 ಸ್ಮಾರ್ಟ್‌ಫೋನ್‌ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 89.2%. ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G35 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11.0 ಆಧಾರಿತ ಕಲರ್‌ ಓಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ರಿಯರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
OPPO A77 and OPPO A55 get price cut in India: Check New Price and more.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X