Home
ಸುದ್ದಿಜಾಲ

ಒಪ್ಪೋ ಪ್ರಿಯರಿಗೆ ಗುಡ್‌ನ್ಯೂಸ್‌!..ಈ ಮೊಬೈಲ್‌ ದರದಲ್ಲಿ ಸಖತ್ ಇಳಿಕೆ!

ಒಪ್ಪೋ ಸಂಸ್ಥೆಯ ಒಪ್ಪೋ A77s ಮೊಬೈಲ್‌ ಇದೀಗ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಆಕರ್ಷಕ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಕೂಡಾ ಪಡೆದಿದೆ.

ಹೌದು, ಇ ಕಾಮರ್ಸ್‌ ದಿಗ್ಗಜ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ಒಪ್ಪೋ A77s ಮೊಬೈಲ್‌ ಶೇ. 31% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಗ್ರಾಹಕರು 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ನ ಈ ಫೋನ್‌ ಅನ್ನು ಗ್ರಾಹಕರು ಈಗ 12,999ರೂ. ಗಳ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರೊಂದಿಗೆ ಲಭ್ಯ ಇರುವ ಎಕ್ಸ್‌ಚೆಂಜ್‌ ಆಫರ್‌, ಬ್ಯಾಂಕ್‌ ಡಿಸ್ಕೌಂಟ್‌ ಹಾಗೂ ಇತರೆ ಕೊಡುಗೆ ಪಡೆದುಕೊಂಡರೆ ಮತ್ತಷ್ಟು ಡಿಸ್ಕೌಂಟ್‌ ಲಭ್ಯ.

ಒಪ್ಪೋ ಪ್ರಿಯರಿಗೆ ಗುಡ್‌ನ್ಯೂಸ್‌!..ಈ ಮೊಬೈಲ್‌ ದರದಲ್ಲಿ ಸಖತ್ ಇಳಿಕೆ!

ಒಪ್ಪೋ A77s ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿದೆ. ಇನ್ನು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಇದೆ. ಹಾಗಾದರೇ ಒಪ್ಪೋ A77s ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಹೀಗಿದೆ

ಒಪ್ಪೋ A77s ಮೊಬೈಲ್‌ 6.56 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಹಾಗೆಯೇ ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 600ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದರ ಜೊತೆಗೆ ಡಿಸ್‌ಪ್ಲೇ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಕೂಡ ಪಡೆದುಕೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಒಪ್ಪೋ A77s ಮೊಬೈಲ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಆಧಾರಿತ ಕಲರ್‌ ಓಎಸ್‌ 12.1 ನಲ್ಲಿ ರನ್‌ ಆಗಲಿದೆ. ಹಾಗೆಯೇ 4 GB RAM + 64 GB ಸ್ಟೋರೇಜ್‌ ಆಂತರೀಕ ವೇರಿಯಂಟ್‌ ಆಯ್ಕೆ ಅನ್ನು ಪಡೆದುಕೊಂಡಿದೆ.

ಒಪ್ಪೋ ಪ್ರಿಯರಿಗೆ ಗುಡ್‌ನ್ಯೂಸ್‌!..ಈ ಮೊಬೈಲ್‌ ದರದಲ್ಲಿ ಸಖತ್ ಇಳಿಕೆ!

ಕ್ಯಾಮೆರಾ ಸೆನ್ಸಾರ್ ಮಾಹಿತಿ

ಒಪ್ಪೋ A77s ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಅಲ್ಲದೇ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಒಪ್ಪೋ ಬೊಕೆ ಫ್ಲೇರ್ ಪೋಟ್ರೇಟ್ ಮೋಡ್, ಫೋಕಸ್ ಮತ್ತು ಬ್ಲರ್ ಅನ್ನು ಒದಗಿಸುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ಒಪ್ಪೋ A77s ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33W ಸೂಪರ್‌ವೂಕ್‌ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ ನಿಮ್ಮ ಫೋನ್‌ ಅನ್ನು ಕೇವಲ 71 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್‌ ಮಾಡಬಹುದಾಗಿದೆ.

ಇನ್ನು ಕನೆಕ್ಟಿವಿಟಿ ಸೌಲಭ್ಯಗಳ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಸಪೋರ್ಟ್‌ ಪಡೆದಿದೆ. ಇದಲ್ಲದೆ IP54 ರೇಟಿಂಗ್, ಸ್ಟೀರಿಯೋ ಸ್ಪೀಕರ್ ಸೆಟ್‌ಅಪ್‌ ಮತ್ತು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಒಪ್ಪೋ A77s ಮೊಬೈಲ್‌ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಇದು ಸನ್‌ಸೆಟ್ ಆರೆಂಜ್ ಮತ್ತು ಸ್ಟಾರಿ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
OPPO A77 now available at offer price tag on flipkart. offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+