Home
ಸುದ್ದಿಜಾಲ

ಈ ಫೋನಿನ ಆಫರ್‌ ಬೆಲೆ 16,499ರೂ!..8GB RAM, 50ಎಂಪಿ ಕ್ಯಾಮೆರಾ ಪಕ್ಕಾ!

ಒಪ್ಪೋ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೋನ್‌ ಗಳಲ್ಲಿ ಒಂದಾಗಿರುವ ಒಪ್ಪೋ A77s ಮೊಬೈಲ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಬಜೆಟ್‌ ವಿಭಾಗದಲ್ಲಿ ಕಾಣಿಸಿಕೊಂಡಿರುವ ಈ ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಬಜೆಟ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಖುಷಿ ತಂದಿದೆ.

ಹೌದು, ಒಪ್ಪೋ ಸಂಸ್ಥೆಯ ಒಪ್ಪೋ A77s ಮೊಬೈಲ್‌ ಫೋನ್‌ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಈಗ 28% ರಷ್ಟು ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಗುರುತಿಸಿಕೊಂಡಿದೆ. ಈ ಫೋನ್‌ 8GB RAM ಮತ್ತು 128 GB ROM ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಬೆಲೆಯು 22,999ರೂ. ಪ್ರೈಸ್‌ ಟ್ಯಾಗ್‌ ಹೊಂದಿದ್ದು, ಡಿಸ್ಕೌಂಟ್‌ನಲ್ಲಿ ಇದು 16,499ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್ ಗಳ ಕೊಡುಗೆ ಸಹ ಗ್ರಾಹಕರಿಗೆ ದೊರೆಯುತ್ತದೆ.

ಈ ಫೋನಿನ ಆಫರ್‌ ಬೆಲೆ 16,499ರೂ!..8GB RAM, 50ಎಂಪಿ ಕ್ಯಾಮೆರಾ ಪಕ್ಕಾ!

ಇದು ಬಜೆಟ್‌ ವಿಭಾಗದ ಫೋನ್‌ ಆಗಿದ್ದರೂ, ಈ ಫೋನಿನ ಕೆಲವು ಫೀಚರ್ಸ್‌ಗಳು ಆಕರ್ಷಕ ಎನಿಸಿವೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 680SoC ಚಿಪ್‌ಸೆಟ್‌ ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಜೊತೆಗೆ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಪವರ್‌ ಸಹ ಪಡೆದಿದೆ. ಇನ್ನು ಈ ಫೋನ್ ಸನ್‌ಸೆಟ್ ಆರೆಂಜ್ ಮತ್ತು ಸ್ಟಾರಿ ಬ್ಲಾಕ್ ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯ. ಹಾಗಾದರೆ ಒಪ್ಪೋ A77s ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A77s ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಒಪ್ಪೋ A77s ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದೆ. ಇನ್ನು ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಡಿಸ್‌ಪ್ಲೇ ವೀಡಿಯೋ ವೀಕ್ಷಣೆಗೆ ಉತ್ತಮವಾದ ಮಾದರಿಯನ್ನು ಕೂಡ ಹೊಂದಿದೆ.

ಒಪ್ಪೋ A77s ಪ್ರೊಸೆಸರ್‌ ಬಲ ಎಷ್ಟು : ಒಪ್ಪೋ A77s ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಆಧಾರಿತ ಕಲರ್‌ ಓಎಸ್‌ 12.1 ನಲ್ಲಿ ರನ್‌ ಆಗಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಒಪ್ಪೋ A77s ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ : ಒಪ್ಪೋ A77s ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಹಾಗೆಯೇ ಒಪ್ಪೋ A77s ಫೋನ್‌ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದಿದೆ. ಜೊತೆಗೆ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಒಪ್ಪೋ ಬೊಕೆ ಫ್ಲೇರ್ ಪೋಟ್ರೇಟ್ ಮೋಡ್, ಫೋಕಸ್ ಮತ್ತು ಬ್ಲರ್ ಅನ್ನು ಒದಗಿಸುತ್ತದೆ.

ಒಪ್ಪೋ A77s ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಫೀಚರ್ಸ್‌ ಏನು : ಒಪ್ಪೋ A77s ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್‌ವೂಕ್‌ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ ನಿಮ್ಮ ಫೋನ್‌ ಅನ್ನು ಕೇವಲ 71 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್‌ ಮಾಡಬಹುದಾಗಿದೆ.

ಒಪ್ಪೋ A77s ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ IP54 ರೇಟಿಂಗ್, ಸ್ಟೀರಿಯೋ ಸ್ಪೀಕರ್ ಸೆಟಪ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಒಪ್ಪೋ A77s ಮೆಮೊರಿ ಮತ್ತು ಕಲರ್‌ ಆಯ್ಕೆ : ಒಪ್ಪೋ A77s ಸ್ಮಾರ್ಟ್‌ಫೋನ್‌ 8GB RAM ಮತ್ತು 128 GB ROM ಆಂತರೀಕ ಸ್ಟೋರೇಜ್‌ ಪಡೆದಿದೆ. ಇದು ಸನ್‌ಸೆಟ್ ಆರೆಂಜ್ ಮತ್ತು ಸ್ಟಾರಿ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Oppo A77s Price Slashed on Amazon: offer price and specifications more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+