ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ A77s ಸ್ಮಾರ್ಟ್‌ಫೋನ್!..33W ವೇಗದ ಚಾರ್ಜಿಂಗ್ ವಿಶೇಷ!
ಒಪ್ಪೋ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಂಡಿದೆ. ಇದೀಗ ಭಾರತದಲ್ಲಿ ಹೊಸ ಹೊಸ ಒಪ್ಪೋ A77s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W SUPERVOOCTM ಫ್ಲ್ಯಾಷ್ ಚಾರ್ಜ್ ಅನ್ನು ಬೆಂಬಲಿಸಲಿದೆ.

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ A77s ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನಿದೆ? ಭಾರತದಲ್ಲಿ ಇದರ ಬೆಲೆ ಎಷ್ಟಿದೆ? ಲಾಂಚ್ ಆಫರ್ ನೀಡಲಾಗಿದೆಯಾ? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A77s ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 1,612x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 600ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಡಿಸ್‌ಪ್ಲೇ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಕೂಡ ಹೊಂದಿದೆ.

ಪ್ರೊಸೆಸರ್ ಬಲವೇನು?
ಒಪ್ಪೋ A77s ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ ColorOS 12.1ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A77s ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಒಪ್ಪೋ ಬೊಕೆ ಫ್ಲೇರ್ ಪೋಟ್ರೇಟ್ ಮೋಡ್, ಫೋಕಸ್ ಮತ್ತು ಬ್ಲರ್ ಅನ್ನು ಒದಗಿಸುತ್ತದೆ.

ಬ್ಯಾಟರಿ ಬ್ಯಾಕ್‌ಅಪ್ ಮತ್ತು ಇತರೆ ಫೀಚರ್ಸ್‌ಗಳೇನು?
ಒಪ್ಪೋ A77s ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ ನಿಮ್ಮ ಫೋನ್ ಅನ್ನು ಕೇವಲ 71 ನಿಮಿಷಗಳಲ್ಲಿ ಸಂಪೂರ್ಣ ಚಾರ್ಜ್ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ IP54 ರೇಟಿಂಗ್, ಸ್ಟೀರಿಯೋ ಸ್ಪೀಕರ್ ಸೆಟಪ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A77s ಸ್ಮಾರ್ಟ್‌ಫೋನ್ ಭಾರತದಲ್ಲಿ 17,999ರೂ. ಆರಂಭಿಕ ಬೆಲೆಯಲ್ಲಿ ಮಾರಾಟಕ್ಕೆ ಬರಲಿದೆ. ಇದು ಸನ್‌ಸೆಟ್ ಆರೆಂಜ್ ಮತ್ತು ಸ್ಟಾರಿ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಇದೇ ಅಕ್ಟೋಬರ್ 7 ರಿಂದ ಸೇಲ್ ಆಗಲಿದೆ.

ಆಫರ್ ಏನಿದೆ?
ಈ ಸ್ಮಾರ್ಟ್‌ಫೋನ್ ಅನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಪ್ರಮುಖ ಬ್ಯಾಂಕ್ ಕಾರ್ಡ್‌ಗಳ ಮೂಲಕ 10% ಕ್ಯಾಶ್‌ಬ್ಯಾಕ್ ದೊರೆಯಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 6 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಯಲ್ಲಿ ಕೂಡ ಲಭ್ಯವಾಗಲಿದೆ. ಜೊತೆಗೆ ಜೀರೋ ಡೌನ್ ಪೇಮೆಂಟ್ ಸ್ಕೀಮ್ ಕೂಡ ದೊರೆಯಲಿದೆ ಎಂದು ಒಪ್ಪೋ ಕಂಪೆನಿ ಹೇಳಿಕೊಂಡಿದೆ.


Click it and Unblock the Notifications








