ಡಿಸ್ಕೌಂಟ್‌ನಲ್ಲಿ ಮೊಬೈಲ್ ಖರೀದಿಸಬೇಕೆ?..ಹಾಗಿದ್ರೆ, ಈ ಚಾನ್ಸ್ ಮಿಸ್ ಮಾಡ್ಕೋಬೇಡಿ!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಕಂಪನಿಯು ಸಹ ಒಂದಾಗಿದ್ದು, ಕೆಲವು ಅತ್ಯುತ್ತಮ ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಆ ಪೈಕಿ ಒಪ್ಪೋ A78 5G ಮೊಬೈಲ್ ಸಹ ಒಂದಾಗಿದ್ದು, ಇದೀಗ ಈ ಫೋನ್ ಬೆಲೆಯಲ್ಲಿ ಸಖತ್ ಡಿಸ್ಕೌಂಟ್ ಆಗಿದೆ. ಹೀಗಾಗಿ ಗ್ರಾಹಕರು ಈ ಫೋನಿನತ್ತ ತಿರುಗಿ ನೋಡುವಂತೆ ಆಗಿದೆ.
ಇ ಕಾಮರ್ಸ್ ತಾಣ ಅಮೆಜಾನ್ ನಲ್ಲಿ ಒಪ್ಪೋ A78 5G ಮೊಬೈಲ್ 14% ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. 8GB RAM + 128 ವೇರಿಯಂಟ್ ಫೋನ್ ಬೆಲೆ 21,999ರೂ. ಇದ್ದು, ಈಗ 18,999ರೂ. ಗಳ ಆಫರ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ.

ಇನ್ನು ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ ಇನ್ನು ಈ ಫೋನ್ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಒಪ್ಪೋ A78 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A78 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ಒಪ್ಪೋ A78 5G ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಇದು 90Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸಲಿದೆ.
ಒಪ್ಪೋ A78 5G ಪ್ರೊಸೆಸರ್ ಪವರ್ ಯಾವುದು : ಒಪ್ಪೋ A78 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 12 ಆಧಾರಿತ ಕಲರ್‌ಒಎಸ್ 12.1 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಅನ್ನು ಸಪೋರ್ಟ್ ಮಾಡುತ್ತದೆ. ಇದರಲ್ಲಿ ಆನ್‌ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5GB ವರೆಗೆ RAM ವಿಸ್ತರಿಸಬಹುದು.
ಒಪ್ಪೋ A78 5G ಕ್ಯಾಮೆರಾ ರಚನೆ ಹೇಗಿದೆ : ಒಪ್ಪೋ A78 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಅನ್ನು ಒಳಗೊಂಡಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯ ಅನ್ನು ಪಡೆದಿವೆ.
ಒಪ್ಪೋ A78 5G ಬ್ಯಾಟರಿ ಪವರ್ ಎಷ್ಟಿದೆ : ಒಪ್ಪೋ A78 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಸೂಪರ್ ವೂಕ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯದ ಆಯ್ಕೆಗಳನ್ನು ಪಡೆದಿದೆ.
ಒಪ್ಪೋ A78 5G ಮೆಮೊರಿ ಮತ್ತು ಕಲರ್ ಆಯ್ಕೆ ಮಾಹಿತಿ : ಒಪ್ಪೋ A78 5G ಮೊಬೈಲ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಗ್ರಾಹಕರು ಈ ಫೋನ್ ಅನ್ನು ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಅಮೆಜಾನ್ ತಾಣದಲ್ಲಿ ಖರೀದಿಸಬಹುದು.


Click it and Unblock the Notifications








