ಒಪ್ಪೋ A78 5G ಮೊಬೈಲ್ ಬೆಲೆಯಲ್ಲಿ ಮತ್ತೆ ಭಾರೀ ಡಿಸ್ಕೌಂಟ್!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಸಂಸ್ಥೆಯು ಕೂಡಾ ಒಂದಾಗಿದ್ದು, ಹಲವು ಆಕರ್ಷಕ ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಆ ಪೈಕಿ ಸಂಸ್ಥೆಯ ಒಪ್ಪೋ A78 5G ಫೋನ್ ಸಹ ಜನಪ್ರಿಯ ಫೋನ್ ಆಗಿ ಗುರುತಿಸಿಕೊಂಡಿದೆ. ಇದೀಗ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ ಆಗಿದ್ದು, ಹೀಗಾಗಿ ಗ್ರಾಹಕರು ಹುಬ್ಬೇರಿಸುವಂತಾಗಿದೆ.
ಹೌದು, ದೈತ್ಯ ಇ ಕಾಮರ್ಸ್ ತಾಣ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ A78 5G ಫೋನ್ ಶೇ. 14% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 128 ವೇರಿಯಂಟ್ ಬೆಲೆ 21,999ರೂ. ಆಗಿದ್ದು, ಆಫರ್‌ನಲ್ಲಿ ಈಗ 18,999ರೂ. ಗಳಿಗೆ ಗ್ರಾಹಕರ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ಸಿಗಲಿವೆ.

ಇನ್ನು ಒಪ್ಪೋ A78 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗಾದರೇ ಒಪ್ಪೋ A78 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A78 5G ಡಿಸ್‌ಪ್ಲೇ ಪೂರ್ಣ ಮಾಹಿತಿ ಇಲ್ಲಿದೆ : ಒಪ್ಪೋ A78 5G ಮೊಬೈಲ್ ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಇದು 90Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸಲಿದೆ.
ಒಪ್ಪೋ A78 5G ಪ್ರೊಸೆಸರ್ ಕಾರ್ಯ ವೈಖರಿ ಹೇಗೆ : ಒಪ್ಪೋ A78 5G ಮೊಬೈಲ್ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 12 ಓಎಸ್ ನಲ್ಲಿ ಕೆಲಸ ನಿರ್ವಹಿಸುತ್ತದೆ. ಇನ್ನು ಇದು 8GB RAM ಮತ್ತು 256GB ಸ್ಟೋರೇಜ್ ಆಯ್ಕೆ ಅನ್ನು ಪಡೆದಿದೆ. ಆನ್‌ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5GB ವರೆಗೆ RAM ವಿಸ್ತರಿಸುವ ಆಯ್ಕೆ ಇದೆ.
ಒಪ್ಪೋ A78 5G ಕ್ಯಾಮೆರಾ ಸೆನ್ಸಾರ್ ಮಾಹಿತಿ ಇಲ್ಲಿದೆ : ಒಪ್ಪೋ A78 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇನ್ನೆ ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜತೆಗೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯ ಅನ್ನು ಹೊಂದಿದೆ.
ಒಪ್ಪೋ A78 5G ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ : ಒಪ್ಪೋ A78 5G ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಸೂಪರ್ ವೂಕ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಕನೆಕ್ಟಿವಿಟಿ ಒದಗಿಸುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯ ಕೂಡಾ ಲಭ್ಯ.
ಒಪ್ಪೋ A78 5G ಸ್ಟೋರೇಜ್ ಮತ್ತು ಕಲರ್ ಆಯ್ಕೆ ಮಾಹಿತಿ : ಒಪ್ಪೋ A78 5G ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಅನ್ನು ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆ ಪಡೆದಿದ್ದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








