ಒಪ್ಪೋ A78 5G ಬೆಲೆಯಲ್ಲಿ ದಿಢೀರ್ ಇಳಿಕೆ!..ಖರೀದಿಗೆ ಬೆಸ್ಟ್ ಟೈಮ್!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಸಂಸ್ಥೆಯು ಸಹ ಒಂದಾಗಿದೆ. ಒಪ್ಪೋ ಸಂಸ್ಥೆಯ ಭಿನ್ನ ಶ್ರೇಣಿಯ ಬೆಲೆಯಲ್ಲಿ ಫೋನ್‌ಗಳನ್ನು ಪರಿಚಯಿಸಿ, ಹೆಚ್ಚಿನ ಗ್ರಾಹಕರನ್ನು ಸೆಳೆದಿವೆ. ಆ ಪೈಕಿ ಇತ್ತೀಚಿಗೆ ಲಾಂಚ್ ಮಾಡಿರುವ ಒಪ್ಪೋ A78 5G ಫೋನ್ ಸಹ ಒಂದಾಗಿದ್ದು, ಇದೀಗ ಈ ಫೋನ್ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್ ಲಭ್ಯ ಇದ್ದು, ಗ್ರಾಹಕರು ತಿರುಗಿ ನೋಡುವಂತೆ ಮಾಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಒಪ್ಪೋ A78 5G ಫೋನ್ 14% ರಿಯಾಯಿತಿ ಪಡೆದಿದೆ. ಈ ಫೋನ್ ಬೆಲೆ 21,999ರೂ. ಇದ್ದು, ಈಗ 18,999ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೇ ಒಪ್ಪೋ A78 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A78 5G ಡಿಸ್‌ಪ್ಲೇ ರಚನೆ ಹೇಗಿದೆ : ಒಪ್ಪೋ A78 5G ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.
ಒಪ್ಪೋ A78 5G ಪ್ರೊಸೆಸರ್ ಯಾವುದು : ಒಪ್ಪೋ A78 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಕಲರ್‌ಒಎಸ್ 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದರಲ್ಲಿ ಆನ್‌ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5GB ವರೆಗೆ RAM ವಿಸ್ತರಿಸಬಹುದು.

ಒಪ್ಪೋ A78 5G ಕ್ಯಾಮೆರಾ ಸೆಟ್‌ಅಪ್ ಹೇಗೆ : ಒಪ್ಪೋ A78 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.
ಒಪ್ಪೋ A78 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ : ಒಪ್ಪೋ A78 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್ ವೂಕ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ 8.5 ಗಂಟೆಗಳ ಗೇಮಿಂಗ್ ಸಮಯವನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.
ಒಪ್ಪೋ A78 5G ಮೆಮೊರಿ ಮತ್ತು ಕಲರ್ ಆಯ್ಕೆ : ಒಪ್ಪೋ A78 5G ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








