ಬಜೆಟ್ ಬೆಲೆಯಲ್ಲಿ ಒಪ್ಪೋ 5G ಫೋನ್ ಖರೀದಿಸಲು ಇದೇ ಉತ್ತಮ ಆಫರ್!
ಪ್ರಸ್ತುತ ಟ್ರೆಂಡಿಂಗ್‌ನಲ್ಲಿರುವ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಪ್ಪೋ ಕಂಪನಿಯು ಕುಡಾ ಒಂದಾಗಿದೆ. ಒಪ್ಪೋ ಕಂಪನಿಯು ಭಿನ್ನ ಶ್ರೇಣಿಯ ಬೆಲೆಯಲ್ಲಿ ಫೋನ್‌ಗಳನ್ನು ಪರಿಚಯಿಸಿ, ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆದಿವೆ. ಆ ಪೈಕಿ ಇತ್ತೀಚಿಗಿನ ಒಪ್ಪೋ A78 5G ಮೊಬೈಲ್ ಕೂಡಾ ಸೇರಿದ್ದು, ಈ ಫೋನ್ ಇದೀಗ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್ ಲಭ್ಯ ಇದ್ದು, ಗ್ರಾಹಕರು OMG ಎನ್ನುವಂತೆ ಮಾಡಿದೆ.
ಹೌದು, ಅಮೆಜಾನ್ ಆನ್‌ಲೈನ್ ಫ್ಲಿಪ್‌ಕಾರ್ಟ್ ನಲ್ಲಿ ಗೂಗಲ್ ಪಿಕ್ಸೆಲ್ 8 ಮೊಬೈಲ್ ಶೇ. 13% ರಷ್ಟು ನೇರ ರಿಯಾಯಿತಿ ಪಡೆದಿದ್ದು, ಈ ಫೋನಿನ (8 GB RAM + 128 GB) ವೇರಿಯಂಟ್ 18,999ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯ ಇದೆ. ಇದಲ್ಲದೇ ಕೆಲವು ಆಯ್ದ ಬ್ಯಾಂಕ್ ಕೊಡುಗೆ ಹಾಗೂ ಕ್ಯಾಶ್‌ಬ್ಯಾಕ್‌ಗಳು ಕೂಡಾ ಲಭ್ಯ ಆಗಲಿವೆ.

ಅಂದಹಾಗೆ ಒಪ್ಪೋ ಸಂಸ್ಥೆಯ ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸೌಲಭ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಹಾಗಾದರೆ ಒಪ್ಪೋ A78 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A78 5G - ಫೋನಿನ ಫೀಚರ್ಸ್
ಒಪ್ಪೋ A78 5G ಮೊಬೈಲ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡುವ ಜೊತೆಗೆ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.

ಒಪ್ಪೋ A78 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 12 ಆಧಾರಿತ ಕಲರ್ ಒಎಸ್ 12.1 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದರಲ್ಲಿ ಆನ್‌ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5GB ವರೆಗೆ RAM ವಿಸ್ತರಿಸಬಹುದು.
ಇನ್ನು ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಅನ್ನು ಒಳಗೊಂಡಿದೆ.

ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್ ಹೆಚ್‌ಡಿ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಪಡೆದಿವೆ.
ಒಪ್ಪೋ A78 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿದ್ದು, 33W ಸೂಪರ್ ವೂಕ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ನಲ್ಲಿದೆ. ಈ ಫೋನ್ 8.5 ಗಂಟೆಗಳ ಗೇಮಿಂಗ್ ಸಮಯವನ್ನು ಒದಗಿಸುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಕನೆಕ್ಟಿವಿಟಿ ನೀಡುತ್ತದೆ.
ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಪೋರ್ಟ್ ನೀಡುತ್ತದೆ. ಒಪ್ಪೋ A78 5G ಮೊಬೈಲ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








