ವೇಗದ ಪ್ರೊಸೆಸರ್ ಇರುವ ಈ ಒಪ್ಪೋ 5G ಫೋನ್ ಬೆಲೆ ಇಳಿಕೆ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆನ್‌ಸೈಟ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಆಕರ್ಷಕ ರಿಯಾಯಿತಿ ಲಭ್ಯ ಇರುತ್ತದೆ. ಹಾಗೆಯೇ ಇತ್ತೀಚಿಗೆ ಬಿಡುಗಡೆ ಆಗಿರುವ ಕೆಲವು ಆಯ್ದ ಮೊಬೈಲ್‌ಗಳಿಗೂ ಕೂಡಾ ವಿಶೇಷ ಆಫರ್ ಲಭ್ಯ ಇರುತ್ತದೆ. ಸದ್ಯ ಒಪ್ಪೋ ಸಂಸ್ಥೆಯ ಒಪ್ಪೋ A78 5G ಮೊಬೈಲ್ ಸಖತ್ ಡಿಸ್ಕೌಂಟ್ ಪಡೆದಿದ್ದು, ಖರೀದಿದಾರರಿಗೆ ಖುಷಿ ನೀಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಒಪ್ಪೋ A78 5G ಫೋನ್ ಶೇ. 14% ರಿಯಾಯಿತಿ ಪಡೆದಿದೆ. ಈ ಫೋನ್ 8 GB RAM + 128 GB ವೇರಿಯಂಟ್ 17,999ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಸಿಗಲಿವೆ.

ಅಂದಹಾಗೆ ಈ ಬಜೆಟ್ ಬೆಲೆಯ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ ಇದು 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ A78 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒಪ್ಪೋ A78 5G - ಫೀಚರ್ಸ್ ಹೀಗಿವೆ
ಒಪ್ಪೋ A78 5G ಮೊಬೈಲ್ 6.56 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.
ಒಪ್ಪೋ A78 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಆಂಡ್ರಾಯ್ಡ್ 12 ಆಧಾರಿತ ಕಲರ್‌ಒಎಸ್ 12.1 ನಲ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದರಲ್ಲಿ ಆನ್‌ಬೋರ್ಡ್ ಸ್ಟೋರೇಜ್ ಬಳಸಿಕೊಂಡು 5GB ವರೆಗೆ RAM ವಿಸ್ತರಿಸುವ ಆಯ್ಕೆ ಇದೆ.

ಒಪ್ಪೋ A78 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಅನ್ನು ಒಳಗೊಂಡಿದೆ.
ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಒಳಗೊಂಡಿವೆ.
ಒಪ್ಪೋ A78 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಸೂಪರ್ ವೂಕ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ 8.5 ಗಂಟೆಗಳ ಗೇಮಿಂಗ್ ಸಮಯವನ್ನು ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ನೀಡುತ್ತದೆ.
ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಇವೆ. ಇನ್ನು ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








